ಮಂಗಳೂರು: ‘ಬಸವ ಪುರಸ್ಕಾರ್ -2025 ಪ್ರಶಸ್ತಿ’ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆ – vishwanews24
ಮಂಗಳೂರು: ‘ಬಸವ ಪುರಸ್ಕಾರ್ -2025 ಪ್ರಶಸ್ತಿ’ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆ
ಮಂಗಳೂರು: ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್ನಿಂದ ನೀಡಲಾಗುವ ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಅಪೂರ್ವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ; ಆರೋಪಿ ಬಂಧನ – vishwanews24
ಮೈಸೂರು ಸುತ್ತೂರು ಕ್ಷೇತ್ರದ ಪರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ 9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಇವರು ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಈ ಬ್ಯಾಂಕ್ ನ್ನು ಒಂದು ಮಾದರಿ ಬ್ಯಾಂಕ್ ಆಗಿ ರೂಪಿಸಿ ಆಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. 110 ವರ್ಷಗಳ ಇತಿಹಾಸವನ್ನು ಹೊಂದಿರುವ ಎಸ್ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ತನ್ನ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನಗರ ಹಾಗೂ ಗ್ರಾಮೀಣ ಭಾಗದ 113 ಶಾಖೆಗಳ ಮೂಲಕ ನೀಡುತ್ತಿದೆ.
