Featured

ಮಂಗಳೂರು: ‘ಬಸವ ಪುರಸ್ಕಾರ್ -2025 ಪ್ರಶಸ್ತಿ’ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಆಯ್ಕೆ – vishwanews24

ಮಂಗಳೂರು: ‘ಬಸವ ಪುರಸ್ಕಾರ್ -2025 ಪ್ರಶಸ್ತಿ’ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಆಯ್ಕೆ

ಮಂಗಳೂರು: ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್‌ನಿಂದ ನೀಡಲಾಗುವ ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಅಪೂರ್ವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ಸುತ್ತೂರು ಕ್ಷೇತ್ರದ ಪರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ 9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಇವರು ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಈ ಬ್ಯಾಂಕ್ ನ್ನು ಒಂದು ಮಾದರಿ ಬ್ಯಾಂಕ್ ಆಗಿ ರೂಪಿಸಿ ಆಗಿ ರೂಪಿಸಿದ ಹೆಗ್ಗಳಿಕೆ ಇವರದ್ದು. 110 ವರ್ಷಗಳ ಇತಿಹಾಸವನ್ನು ಹೊಂದಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ತನ್ನ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನಗರ ಹಾಗೂ ಗ್ರಾಮೀಣ ಭಾಗದ 113 ಶಾಖೆಗಳ ಮೂಲಕ ನೀಡುತ್ತಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago