ಮಂಗಳೂರು: ಇಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ.
ಗುರುವಾರ ರಾತ್ರಿ ನಗರದ ಪಂಪ್‌ವೆಲ್ ಬಳಿ ಈ ಘಟನೆ ನಡೆದಿದೆ. ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ ಹಲ್ಲೆಗೆ ಒಳಗಾದವರು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ. ರಾತ್ರಿ ಸುಮಾರು 9.30ಕ್ಕೆ ಬಸ್ ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್‌ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24
ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಒಂದು ವಾರದಲ್ಲಿ ಜಿಲ್ಲೆಯ ಸುರತ್ಕಲ್, ಬಂಟ್ವಾಳ, ಪಂಪ್‌ವೆಲ್ ಬಳಿ ಇಂತಹ ಘಟನೆಗಳು ನಡೆದಿವೆ.
ಬಂಧನಕ್ಕೆ ಕ್ರಮ: ನಗರದ ಪಂಪ್‌ವೆಲ್ ಬಳಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…