ಮಂಗಳೂರು: ನಗರದ ಸಿಟಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲೇ ಕುಳಿತ ವ್ಯಕ್ತಿಯೊಬ್ಬ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನಾದ್ಯಂತ ಭಾರೀ ಸುದ್ದಿಯಾಗಿತ್ತು, ಮಹಿಳೆಯರ ಸುರಕ್ಷತೆ ಬಗ್ಗೆ ಚರ್ಚೆಯಾಗಿತ್ತು. ಇದೀಗ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎರಡು ದಿನ ಕಳೆಯೊದರೊಳಗೆ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಕಾಸರಗೋಡಿನ ಪೆರ್ಲ ನಿವಾಸಿ ಹುಸೈನ್ (41) ಬಂಧಿತ ಆರೋಪಿ. ಇದೇ 14 ರಂದು ಖಾಸಗಿ ಬಸ್‌ನಲ್ಲಿ ಮಂಗಳೂರಿನ ಪಂಪ್‌ವೆಲ್‌ನತ್ತ ಮಹೇಶ್ ಬಸ್‌ನಲ್ಲಿ ಯುವತಿ ಪ್ರಯಾಣಿಸುತ್ತಿದ್ದ ವೇಳೆ, ದೇರಳಕಟ್ಟೆಯಿಂದ ಬಸ್ ಹತ್ತಿದ್ದ ಹುಸೇನ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆಯ ಮೈ ಮುಟ್ಟುವ ಪ್ರಯತ್ನ ನಡೆಸಿದ್ದಾನೆ. ಕೂಡಲೇ ಯುವತಿ ಧೈರ್ಯ ತೋರಿ ಆತನಿಗೆ ಬೈದು ಬೇರೆ ಸೀಟಿನತ್ತ ಕಳುಹಿಸಿದ್ದಾಳೆ.
ಆದರೆ ಬೇರೆ ಬಸ್‌ನಿಂದ ಮತ್ತೆ ಇಳಿದು ಯುವತಿ ಇದ್ದ ಬಸ್ ಏರಿ ಮತ್ತೆ ಆಕೆಯ ಬಳಿ ಕುಳಿತು ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಈ ರೀತಿ ಯಾರಿಗೂ ಆಗಬಾರದು ಎನ್ನುವ ನಿಟ್ಟಿನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಆತನ ಫೋಟೊ ಹಾಕಿ ತನ್ನ ನೋವು ತೋಡಿಕೊಂಡಿದ್ದಳು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ತಂಡ ರಚಿಸಿದ ಪೊಲೀಸರು ಆರೋಪಿ ಹುಸೈನ್‌ನನ್ನು ಬಂಧಿಸಿದ್ದಾರೆ.
ಪೊಲೀಸರೆದುರೇ ಯುವತಿಯಿಂದ ಕಪಾಳಮೋಕ್ಷ
ಬಸ್ ಪ್ರಯಾಣದಲ್ಲಿ ಕಿರುಕುಳ ನೀಡಿದ್ದ ವ್ಯಕ್ತಿಗೆ, ನಗರದಲ್ಲಿನ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲೇ ನೊಂದ ಯುವತಿಯು ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ನಡೆದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಗುರುವಾರ ಕಮಿಷನರೇಟ್ ಕಚೇರಿಗೆ ಕರೆದುಕೊಂಡು ಬಂದಿದ್ದರು. ಘಟನೆಯಿಂದ ನೊಂದಿದ್ದ ಯುವತಿಗೆ, ಆತನ ಮುಖ ನೋಡುತ್ತಲೇ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಪೊಲೀಸರೆದುರೇ ಹುಸೈನ್‌ಗೆ ಯುವತಿ ಕಪಾಳಮೋಕ್ಷ ಮಾಡಿದ್ದಾಳೆ.
ಎಲ್ಲ ಯುವತಿಯರು, ಮಹಿಳೆಯರಿಗೆ ಧೈರ್ಯ, ವಿಶ್ವಾಸ ಮೂಡಿಸುವ ಕಾರ್ಯ ಮಾಡಿದ್ದಾರೆ’ ಎಂದರು. ಪ್ರಕರಣ ಭೇದಿಸಿದ ತಂಡಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ₹10 ಸಾವಿರ ಬಹುಮಾನ ನೀಡಿದರು. ಕಮಿಷನರ್ ಹಾಗೂ ಡಿಸಿಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…