ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.
ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ.
ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ಮಂಗಳೂರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…