ಮಂಗಳೂರು: ಯುವಕರ ತಂಡವೊಂದು ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ವೇಳೆ ಕಣ್ಣೂರು ಬಳಿ ಬಸ್ ನಿಲ್ಲಿಸದ್ದಕ್ಕೆ ಎಸ್.ಕೆ.ಟ್ರಾವೆಲ್ ಹೆಸರಿನ ಬಸ್ ನಿರ್ವಾಹಕ ಯಶವಂತ್ ಮೇಲೆ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡ ನಿರ್ವಾಹಕ ಯಶವಂತ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟೈಮಿಂಗ್ ಹಿನ್ನೆಲೆ ಕಣ್ಣೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಚಾಲಕ ವಿರುದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರೋರ್ವರು ಪ್ಯಾಸೆಂಜರ್ ಒಬ್ಬನಿಂದ ಹಲ್ಲೆ ನಡೆಸಲಾಗಿದ್ದು ಆ ಬಳಿಕ ಮತ್ತೆ ಹತ್ತಾರು ಜನ ನಿರ್ವಾಹಕನ ಎಳೆದು ಹಾಕಿ ಹಲ್ಲೆ ಆರೋಪಿಸಲಾಗಿದೆ.
ಸದ್ಯ ಎರಡೂ ಕಡೆಯವರಿಂದ ಕಂಕನಾಡಿ ನಗರ ಠಾಣೆಗೆ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬುಧವಾರ ಬಸ್ ಬಂದ್ ಮಾಡಲಾಗಿದ್ದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಡ್ಯಾರ್ ಕಟ್ಟೆ ಭಾಗದಲ್ಲಿ ಜಮಾಯಿಸಿದ ಬಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಅಡ್ಯಾರ್ ಕಟ್ಟೆ ಬಳಿ ಎಸಿಪಿ ನೇತೃತ್ವದಲ್ಲಿ ಬಿಗು ಪೊಲೀಸ್ ಭದ್ರತೆ ನೀಡಲಾಗಿದ್ದು, ಸದ್ಯ ಗುಂಪು ಚದುರಿಸಿ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…