ಮಂಗಳೂರು:ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ.
ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಇನ್ನೂ ಆತನ ಐಷಾರಾಮಿ ಬಂಗಲೆಯನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.
ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು ಕೋಟಿ ರೂ. ಮುಂಗಡ ಹಣ ಪಡೆದು ರೋಷನ್ ಸಲ್ಡಾನ ಮೋಸ ಮಾಡುತ್ತಿದ್ದ. ಈ ಸಂಬಂಧ ಇಬ್ಬರು ಉದ್ಯಮಿಗಳು ನೀಡಿದ್ದ ದೂರಿನ ಆಧಾರದಲ್ಲಿ ಕಳೆದ ಜು.17 ರಂದು ರೋಷನ್ ಸಲ್ಡಾನನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…