Featured

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮಂಗಳೂರಿನಲ್ಲಿ ಕೆಲಸಕ್ಕೆ ಬಾಂಗ್ಲಾದೇಶದ ಪ್ರಜೆಗಳನ್ನು ಕರೆತಂದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ, ರಸುಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತರುತ್ತಿದ್ದು, ಅವರೊಂದಿಗೆ ಕೆಲ ಬಾಂಗ್ಲಾದೇಶೀಯರನ್ನೂ ಕರೆತಂದಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು, “ರಸುಲ್ ಇಸ್ಲಾಂನನ್ನು ಬಂಧಿಸುವ ಸಂಬಂಧ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ಸಮನ್ವಯ ಸಾಧಿಸಿದ್ದರು. ಅದರಂತೆ ಕೋಲ್ಕತ್ತಾದಲ್ಲಿ ಆತನನ್ನು ಬಂಧಿಸಲಾಗಿದೆ. ಆತನನ್ನು ಮಂಗಳೂರಿಗೆ ಕರೆತರಲು ನಮ್ಮ ಪೊಲೀಸ್ ತಂಡ ಈಗಾಗಲೇ ಕೋಲ್ಕತ್ತಾಕ್ಕೆ ತೆರಳಿದೆ. ಆತ ಇಲ್ಲಿಗೆ ಬಂದ ಬಳಿಕ ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago