Featured

ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ – Vishwanews24

ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ

ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ.

ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹಲವು ಮೂಲಗಳಿಂದ ಮತ್ತು ಪತ್ರಿಕೆಗಳಲ್ಲಿನ ಮಾಹಿತಿಯಿಂದ ಶಾರೀಕ್ ಐಸಿಸ್ ನಂತಹ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದ್ದನು ಎಂಬ ವಿಚಾರವು ನಮ್ಮ ಗಮನಕ್ಕೆ ಬಂದಿರುತ್ತದೆ.

ಇಂತಹ ಸನ್ನಿವೇಶಗಳಿಂದ ನಮ್ಮ ನಾಗರಿಕರಿಗೆ ಅಭದ್ರತೆಯ ಕೊರತೆ ಎದ್ದುಕಾಣುತ್ತಿದೆ.ಹಾಗೆಯೆ ಸಮಾಜದಲ್ಲಿನ ಶಾಂತಿಯನ್ನು ಹಾಳುಮಾಡುವ ಉದ್ದೇಶ ಮತ್ತು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದೆ ಇರುವುದು ಇಂತಹ ಕೃತ್ಯಗಳು ಮರುಕಳಿಸುವಂತಾಗಿದೆ.

ಆದ್ದರಿಂದ, ಸಮಾಜದಲ್ಲಿ ಶಾಂತಿ ಕದಡುವ ಹಾಗು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದ ಮತ್ತು ಭಯೋತ್ಪಾದನೆಯಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪಿ ಪರವಾಗಿ ಮಾನ್ಯ ನ್ಯಾಯಾಲಯದಲ್ಲಿ ಸಂಘದ ಪದಾಧಿಕಾರಿಗಳೇ ಆಗಲಿ ಅಥವಾ ಸದದಸ್ಯರುಗಳೇ ಆಗಲಿ ಅಥವಾ ಇನ್ಯಾವುದೇ ಜಿಲ್ಲೆಯ ನ್ಯಾಯವಾದಿಗಳೇ ಆಗಲಿ ಆರೋಪಿಯ ಪರ ವಕಾಲತ್ತು ನಡೆಸದಾಗಿ ಕರೆ ನೀಡಬೇಕು. ಈ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವಂತಹ ತಾವುಗಳು ಸಮಾಜಘಾತುಕರ ವಿರುದ್ಧ ಕಾನೂನು ಸಮರಕ್ಕೆ ಸಹಕಾರ ನೀಡಬೇಕೆಂದು ಎಂದು ಬಜರಂಗದಳ ಮನವಿ ಮಾಡಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago