Judge and gavel in courtroom
ಮಂಗಳೂರು: ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತಯ ವೀಡಿಯೊ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ರೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ಕಾಮುಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2024ರ ಮಾ.10ರಂದು ಬಜೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ರಾತ್ರಿ 8:45ರ ಸುಮಾರಿಗೆ ಬಾಲಕಿ ತನ್ನ ಮನೆಯ ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದಳು. ಈ ವೇಳೆ ಆರೋಪಿ ಗಗನ್ (24) ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಣ ಮಾಡಿದ್ದ. ಮೊಬೈಲ್ ಲೈಟ್ ಕಂಡು ಬಾಲಕಿ ಬೊಬ್ಬೆ ಹೊಡೆದಾಗ ಆಕೆಯ ತಾಯಿ ಬಂದಿದ್ದರು. ಈ ವೇಳೆ ಆರೋಪಿ ಓಡಿ ತಪ್ಪಿಸಿಕೊಂಡಿದ್ದಾನೆ.
ಈ ಬಗ್ಗೆ ಬಜೈ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಸೆಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ. ತನಿಖೆ ನಡೆಸಿದ್ದರು. ಎಸ್ಸೆ ಸತೀಶ್ ಕೆ.ಎಸ್. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪಕರಣ ನಡೆದು ಕೇವಲ 9 ತಿಂಗಳಿನಲ್ಲೇ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸ್) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 354 (ಸಿ) ಅಡಿಯಲ್ಲಿ ಆರೋಪಿಗೆ 1ವರ್ಷ ಸಾದಾ ಸಜೆ, 20,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10,000 ರೂ.ವಲ್ಲದೆ ಪ್ರತ್ಯೇಕವಾಗಿ 1ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…