ಮಂಗಳೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲನೆ ಮಾಡದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…