Featured

ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ಮಂಗಳೂರು,: ಬಾಲಕನಿಗೆ ಕೆಮ್ಮು, ಉಸಿರಾಟ ತೊಂದರೆ, ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿ, ಎಕ್ಸ್‌ರೇ ತೆಗೆ ದಾಗ ಶ್ವಾಸಕೋಶದಲ್ಲಿ ಗುಂಡುಸೂಜಿ ಕಂಡು ಬಂದಿರುವ ಪ್ರಕರಣವೊಂದು ನಗರದ ಹೊರ ವಲಯದ ಬಜಾಲ್‌ನಿಂದ ವರದಿಯಾಗಿದೆ.

ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶಿರ್ (12) ಎಂಬವರ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ಸುಮಾರು 15 ದಿನಗಳಿಂದ ಮುಬಶ್ಶಿರ್‌ಗೆ ನಿರಂತವಾಗಿ ಕೆಮ್ಮು, ಜ್ವರ ಕಂಡುಬಂದಿತ್ತು. ಇದೊಂದು ಸಾಮಾನ್ಯ ರೋಗ ಲಕ್ಷಣವೆಂದು ಪರಿಗಣಿಸಿದ್ದ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದರೂ ಕೆಮ್ಮು ನಿಂತಿರಲಿಲ್ಲ. ಜ್ವರವೂ ಮತ್ತೆ ಕಾಡತೊಡಗಿತು. ಈ ಹಿನ್ನೆಲೆಯಲ್ಲಿ ಪೋಷಕರು ಆತನನ್ನು ತಜ್ಞ ವೈದ್ಯರಿಗೆ ತೋರಿಸಿದರು.

ಇದನ್ನೂ ಓದಿ : ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ ಪೊಲೀಸ್ ಠಾಣೆಯೇ ಆಸರೆ -Vishwanews24

ಕಂಕನಾಡಿಯ ಮಕ್ಕಳ ತಜ್ಞವೈದ್ಯ ಡಾ.ರಾಮ್‌ಗೋಪಾಲ್ ಶಾಸ್ತ್ರಿಯವರಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಎಕ್ಸ್‌ರೇ ತೆಗೆಸಿದಾಗ ಮುಬಶ್ಶಿರ್‌ನ ಶ್ವಾಸಕೋಶದಲ್ಲಿ ಗುಂಡುಸೂಜಿ ಇರುವುದು ಪತ್ತೆಯಾದಾಗ ವೈದ್ಯರು ಸಹಿತ ಪೋಷಕರು ಆಶ್ವರ್ಯಚಕಿತರಾಗಿದ್ದರು. ಆದರೆ ಮುಬಶ್ಶೀರ್ ನಿಗೆ ಗುಂಡುಸೂಜಿ ಹೇಗೆ ಶ್ವಾಸಕೋಶ ಸೇರಿತೆಂದೇ ಗೊತ್ತಿಲ್ಲದಿರುವುದು ಮತ್ತೊಂದು ಅಚ್ಚರಿಯಾಗಿದೆ.

ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಬಾಲಕನ ಬಲಬದಿಯ ಶ್ವಾಸಕೋಶದಲ್ಲಿ ನೋಟಿಸ್ ಬೋರ್ಡಿಗೆ ಬಳಸಲಾಗುವ ಗುಂಡುಸೂಜಿ ಪತ್ತೆಯಾಗಿದೆ. ಬಾಲಕನಿಗೆ ಶಸ್ತ್ರಚಿಕಿತ್ಸೆ ನೀಡಲೆಂದು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಕೂಲಂಕಷವಾಗಿ ಪರೀಕ್ಷಿಸಿದ ವೈದ್ಯರು, ವೈದ್ಯಕೀಯ ಉಪಕರಣವೊಂದನ್ನು ಬಳಸಿ ಪೈಪ್ ಮಾದರಿಯ ವಸ್ತುವೊಂದರ ಸಹಾಯದಿಂದ ಗುಂಡುಸೂಜಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಇದನ್ನೂ ಓದಿ : ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

18 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

18 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

19 hours ago