Featured

ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ – vishwanews24

ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಈ ತೀರ್ಪು ಪ್ರಕಟಿಸಿದ್ದಾರೆ ಎಂದು ಆರೋಪಿ ಪರ ವಕೀಲ ಸುಕೇಶ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

 ಇದನ್ನೂ ಓದಿ:

ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತೆಯನ್ನು ಆರೋಪಿ ತನ್ನ ಬೈಕ್‌ನಲ್ಲಿ ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಕರೆದೊಯ್ದು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ, ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಠಾಣೆ ಪೊಲೀಸರು, ಆರೋಪಿಯನ್ನು ಅದೇ ದಿನ ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿ ಎಂಬುದು ಗೊತ್ತಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ 8 ಮಂದಿ ಸಾಕ್ಷಿಗಳ ವಿಚಾರಣೆ ನಡೆಸಿದ್ದು, 26 ದಾಖಲೆಗಳು ಹಾಗೂ ಒಂದು ಮೊಬೈಲ್‌ನ್ನು ಸಾಕ್ಷಿಯಾಗಿ ಗುರುತಿಸಲಾಗಿತ್ತು.

 ಇದನ್ನೂ ಓದಿ:

ಅಭಿಯೋಜನೆಯ ಪರವಾಗಿ ಸಾಕ್ಷಿ ನೀಡಿದ್ದ ನೊಂದ ಬಾಲಕಿ ಹಾಗೂ ಪೋಷಕರು ಅತ್ಯಾಚಾರ ನಡೆದಿದೆ ಎಂಬುದನ್ನು ಹೇಳಿದ್ದರು. ಸಾಕ್ಷಿಗಳೂ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನೀಡಿದ್ದರು. ಆದರೆ, ಬಲವಾದ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿಯನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

28 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

40 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

55 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago