Featured

ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 10 ವರ್ಷ ಜೈಲು -Vishwanews24

ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 10 ವರ್ಷ ಜೈಲು -Vishwanew

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ (ಪೊಕ್ಸೋ) ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.

ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪ್ರೊಬೆಷನರಿ ಡಿವೈಎಸ್‌ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ 10 ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago