ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ (ಪೊಕ್ಸೋ) ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.
ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪ್ರೊಬೆಷನರಿ ಡಿವೈಎಸ್‌ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ ಹಾಗೂ ಪೊಕ್ಸೋ ಕಾಯಿದೆಯ ಕಲಂನಡಿ 10 ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…