ಮಂಗಳೂರು: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕುಡುಪುಕಟ್ಟೆಯ ಧೀರಜ್ (25) ಅವರು ಮಂಗಳವಾರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸುವಾಗ ವಿಳಂಬವಾದ ಹಿನ್ನೆಲೆಯಲ್ಲಿ ಅವರ ಅಂಗಾಂಗ ದಾನವೂ ವಿಫಲವಾಗಿದೆ.
ಧೀರಜ್ ಮೆದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದದರು. ಹೀಗಾಗಿ ಕುಟುಂಬದವರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ಅಂಗಾಂಗಗಳನ್ನು ಪಡೆಯಲು ಚಾರ್ಟರ್ ವಿಮಾನದಲ್ಲಿ ಚೆನ್ನೈಯಿಂದ ತಜ್ಞರ ತಂಡ ಆಗಮಿಸಿತ್ತು. ಆದರೆ ಬೆಂಗಳೂರಿನಿಂದ ತಜ್ಞರ ತಂಡ ಬರುವುದು ತಡವಾದ ಕಾರಣ ಅಂಗಾಂಗ ದಾನ ವಿಫಲವಾಯಿತು. ಬೆಂಗಳೂರಿನ ತಂಡ ಆಗಮಿಸುವ ಮೊದಲೇ ಧೀರಜ್ ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.
ರವಿವಾರ ಮುಂಜಾನೆ ಸುಮಾರು 2.15ಕ್ಕೆ ಸ್ನೇಹಿತ ಗಣೇಶ್ ಅವರೊಂದಿಗೆ ಬಿಕರ್ನಕಟ್ಟೆ ಕೈಕಂಬ ಕಡೆಯಿಂದ ನಂತೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಕರ್ನಕಟ್ಟೆ ಉಸ್ಮಾನಿಯ ಕಾಂಪ್ಲೆಕ್ಸ್ ಮುಂಭಾಗ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು. ಈ ವೇಳೆ ಧೀರಜ್ ಮತ್ತು ಸ್ನೇಹಿತ ಗಣೇಶ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಧೀರಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…