ಮಂಗಳೂರು: ಬಿಕ್ಕರ್ನಕಟ್ಟೆ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಿಕ್ಕರ್ನಕಟ್ಟೆ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ.

ಮೇ 29 ಭಾನುವಾರ ಮುಂಜಾನೆ ಘಟನೆ ನಡೆದಿದ್ದು, ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನು ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುವ ಆಟೋ ಚಾಲಕ ಪ್ರವೀಣ್ ಕುಮಾರ್ ಇದನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಂಗಳೂರು: ಮಳಲಿಯನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು : ಕಲ್ಲಡ್ಕ ಡಾ. ಪ್ರಭಾಕರ್ ಭಟ್ -Vishwanews24

 

Leave a Reply