Featured

ಮಂಗಳೂರು : ಬಿಜೆಪಿಯ ನಿರ್ಲಕ್ಷ್ಯ ಭಾವನೆಯಿಂದಾಗಿ ಮುಗ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಿರುವುದು ನಾಚೀಕೆಗೇಡು : ಅಕ್ಷಿತ್‌ ಸುವರ್ಣ ಆಕ್ರೋಶ – Vishwanews24

ಇಡೀ ರಾಜ್ಯಕ್ಕೆ ಹಿಜಾಬ್‌ ಮತ್ತು ಕೇಸರಿ ವಿವಾದ ಬೆಂಕಿ ಹಚ್ಚಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾನಗರಿ ಎಂದು ಕರೆಯುತ್ತಿರುವ ಉಡುಪಿ ಜಿಲ್ಲೆಯ ಮಾನವನ್ನು ಹರಾಜು ಹಾಕುವ ಕೆಲಸ ಸರಕಾರ ನಡೆಸಿದೆ..

ಮಂಗಳೂರು: ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಇಂದು ಹಿಜಾಬ್‌ ವಿಚಾರ ಬೇರೆ ಬೇರೆ ಕೋಮು ಬಣ್ಣವನ್ನು ಪಡೆದು ರಾಜ್ಯ ವ್ಯಾಪಿ ಅಲ್ಲದೆ ದೇಶವ್ಯಾಪಿ ಹರಡಲು ಕಾರಣವಾಗಿದೆ. ಸಮಸ್ಯೆ ಆರಂಭವಾದಾಗಲೇ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳದೆ ಬಿಜೆಪಿ ಸರಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದರಿಂದ ಇಂದು ಕೈ ಮೀರಿ ಹೋಗಿದೆ. ಇವರ ನಿರ್ಲಕ್ಷ್ಯ ಭಾವನೆಯಿಂದಾಗಿ ಮುಗ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಿರುವುದು ನಾಚೀಕೆಗೇಡು ಎಂದು ದಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್‌ ವಿಚಾರ ಉಡುಪಿ ಜಿಲ್ಲೆಯ ಒಂದು ಸರಕಾರಿ ಕಾಲೇಜಿನಲ್ಲಿ ಸಮಸ್ಯೆಯಾದಾಗ ಆಗಲೇ ಅಲ್ಲಿನ ಸ್ಥಳೀಯ ಶಾಸಕರು ಹಾಗೂ ಆಡಳಿತ ಮಂಡಳಿ ಸರಕಾರದ ಜೊತೆಗೆ ಸೇರಿಕೊಂಡು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕಿತ್ತು. ಬಿಜೆಪಿ ಸರಕಾರಕ್ಕೆ ಇದೊಂದು ಚುನಾವಣಾ ವಿಚಾರವಾಗಿ ಮುಂದುವರೆಸುವ ಆಸೆ ಇದ್ದ ಪರಿಣಾಮ ಸಮಸ್ಯೆ ದೊಡ್ಡದಾಗಲು ಅವಕಾಶ ಮಾಡಿಕೊಟ್ಟಿದೆ. ಇದಲ್ಲದೆ ಇತ್ತೀಚೆಗೆ ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರದಿಂದ ಮುಖಭಂಗ ಅನುಭವಿಸಿದ ಬಿಜೆಪಿ ಸರಕಾರಕ್ಕೆ ಆ ವಿಷಯವನ್ನು ಮರೆಮಾಚುವ ಅಗತ್ಯದಿಂದ ಹಿಜಾಬ್‌ ವಿಚಾರವನ್ನು ಮುನ್ನಲೆಗೆ ತಂದಿದೆ. ತಮ್ಮ ಸರಕಾರದ ಹುಳುಕನ್ನು ಮುಚ್ಚಲು ಬಿಜೆಪಿ ಸರಕಾರಕ್ಕೆ ಒಳ್ಳೆಯ ವಿಚಾರ ಸಿಕ್ಕಿದ್ದು ಈ ಮೂಲಕ ಇಡೀ ರಾಜ್ಯಕ್ಕೆ ಹಿಜಾಬ್‌ ಮತ್ತು ಕೇಸರಿ ವಿವಾದ ಬೆಂಕಿ ಹಚ್ಚಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇಂದು ಈ ವಿಚಾರ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾನಗರಿ ಎಂದು ಕರೆಯುತ್ತಿರುವ ಉಡುಪಿ ಜಿಲ್ಲೆಯ ಮಾನವನ್ನು ಹರಾಜು ಹಾಕುವ ಕೆಲಸ ಸರಕಾರ ನಡೆಸಿದೆ ಎಂದರೆ ತಪ್ಪಾಗಲಾರದು.

ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಆರಂಭಿಸಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ. ಕುಂದಾಪುರದಲ್ಲಿ ಇತ್ತೀಚೆಗೆ ಹಿಜಾಬ್‌ ವಿಚಾರದಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನ ಒಳಗೂ ಬರಲು ಅವಕಾಶ ನೀಡದೆ ಬಿಸಿಲಿಗೆ ರಸ್ತೆಯಲ್ಲಿ ಕುಳಿತುಕೊಳಿಸಿರುವುದು ಬಿಜೆಪಿಯವರಿಗೆ ಮಹಿಳೆಯರ ಹಾಗೂ ವಿದ್ಯಾರ್ಥೀನಿಯರ ಕಾಳಜಿ ಏನು ಎನ್ನುವುದು ಎದ್ದು ತೋರುತ್ತದೆ. ಕೋವಿಡ್‌ ಕಾಲದಲ್ಲಿ ಶಾಲೆಗಳು ಸರಿಯಾಗಿ ನಡೆದಿಲ್ಲ ಎಂದು ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಹಿಜಾಬ್‌ ವಿವಾದ ಅನಗತ್ಯ ಸೃಷ್ಟಿ ಮಾಡಲಾಗಿದೆ

ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸು ಆಳುವ ಸರಕಾರಕ್ಕೆ ಹಾಗೂ ನಾಯಕರಿಗೆ ನಿಜವಾಗಿ ಇದ್ದಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲುಗಳ ವಿಷಯವನ್ನು ಕೂಡಲೇ ನಿಲ್ಲಿಸಬೇಕು. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಎರಡು ಸಮುದಾಯದ ಸಂಘಟನೆಗಳನ್ನು ಕಾಲೇಜು ಆವರಣಕ್ಕೆ ಬರದಂತೆ ತಡೆಯುವ ಕೆಲಸ ಜಿಲ್ಲಾಡಳಿತದಿಂದ ನಡೆಯಬೇಕಾಗಿದೆ. ಅನಗತ್ಯ ಕೋಮು ಭಾವನೆ ಕೆರಳಿಸುವ ಕೆಲಸವನ್ನು ಮಾಡುವ ಕೆಲಸ ಮಾಡುವ ಸಂಘಟನೆಗಳಿಗೆ ಜಿಲ್ಲಾಡಳಿತ ಕೂಡಲೇ ಎಚ್ಚರಿಕೆ ನೀಡಬೇಕು. ಮುಗ್ದ ವಿದ್ಯಾರ್ಥಿಗಳು ಎಲ್ಲರೂ ಒಟ್ಟಾಗಿ ಸೇರಿ ಶಿಕ್ಷಣದ ಮೂಲಕ ತಮ್ಮ ಭವಿಷ್ಯ ಕಾಣುವ ಸಂದರ್ಭದಲ್ಲಿ ಶಿಕ್ಷಣದಲ್ಲಿ ವಿಷ ತುಂಬುವುದು ಬೇಡ. ಬಿಜೆಪಿ ಸರಕಾರ ಇಂಥ ಸೂಕ್ಷ್ಮ ವಿಷಯ ಇನ್ನಷ್ಟು ಬೆಳೆಯಲು ಅವಕಾಶ ನೀಡದೇ ಸೂಕ್ತ ರೀತಿಯಲ್ಲಿ ನಿಭಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

2 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

3 hours ago