Featured

ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ – Vishwanews24

ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ

ಮಂಗಳೂರು: ಕಾರ್ಪೊರೇಟ್ ಹಿತಾಸಕ್ತಿಗಳ ಪರವಾದ ಬಿಜೆಪಿ ಅಭ್ಯರ್ಥಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಲಿಸುವ ಪ್ರತಿಜ್ಞೆಯೊಂದಿಗೆ ಆಪ್, ಸಿಪಿಐ, ಸಿಪಿಎಂ, ಜನತಾದಳವನ್ನು ಒಳಗೊಂಡ ಜಾತ್ಯತೀತ ಪಕ್ಷಗಳು ಹಾಗೂ ಜಿಲ್ಲೆಯ ವಿವಿಧ ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳು ವೇದಿಕೆಯಲ್ಲಿ ಐಕ್ಯ ಪ್ರದರ್ಶಿಸಿದ್ದಾರೆ.

ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಜನ ಸಮಾವೇಶದಲ್ಲಿ ಜಿಲ್ಲೆಯ ನೈಜ ಅಭಿವೃದ್ಧಿ ಹಾಗೂ ಸೌಹಾರ್ದಕ್ಕಾಗಿ 25ರಷ್ಟು ವಿವಿಧ ಪಕ್ಷ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಪರಸ್ಪರ ಕೈಜೋಡಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದರು. ಈ ಸಂದರ್ಭ ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟದ ಜತೆ ಗುರುತಿಸಿಕೊಂಡಿರುವ ಜನತಾ ದಳದ ಜಿಲ್ಲಾ ಘಟಕದ ಪ್ರಮುಖರು ನಝೀರ್ ಉಳ್ಳಾಲ್ ನೇತೃತ್ವದಲ್ಲಿ ಜನ ಸಮಾವೇಶದಲ್ಲಿ ದ.ಕ. ಜಿಲ್ಲಾ ಜನತಾ ಪರಿವಾರದ ಹೆಸರಿನಲ್ಲಿ ಬೆಂಬಲ ಸೂಚಿಸಿದರು.

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಕೊರೋನ ಸಂಕಷ್ಟದ ನಡುವೆ ನಿರುದ್ಯೋಗ, ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಿಂದಾಗಿ ಉಸಿರಾಡುವಂತಾಗಿದೆ. ಆದರೆ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದ ಶಾಸಕರನ್ನು ಅಪರೇಶನ್ ಕಮಲದ ಮೂಲಕ ಖರೀದಿಸಿ ಸರಕಾರವನ್ನು ಅಸ್ತಿರಗೊಳಿಸಿ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ ಎಂದು ಹೇಳಿದರು.

ಗ್ಯಾರಂಟಿಯನ್ನು ವಿರೋಧಿಸುವ ಬಿಜೆಪಿಯ ಶಾಸಕರನ್ನೇ ಅಧಿಕ ಸಂಖ್ಯೆಯಲ್ಲಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯೇ ಗ್ಯಾರಂಟಿಗಳ ಫಲಾನುಭವಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಅಮಲನ್ನು ಮತದಾರರಲ್ಲಿ ತುಂಬಿಸಿ ಜನರ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿರುವ ಬಿಜೆಪಿಯನ್ನು ಸೋಲಿಸಬೇಕು ಎಂದವರು ಹೇಳಿದರು.

10 ವರ್ಷಗಳ ಹಿಂದೆ ವಿದೇಶದಲ್ಲಿರುವ ಕಪ್ಪು ಹಣ ತರುತ್ತೇವೆ. ಜನರಿಗೆ ಹಂಚುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ. ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿಸಿ ವಿಶ್ವ ಗುರು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ಈಗ ಡಾಲರ್ನೆದರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿದು ವಿಶ್ವದೆದುರು ಬೆತ್ತಲಾಗಿದ್ದಾರೆ. ತಾನು ನೀಡಿರುವ ಭರವಸೆ ಈಡೇರದ ಬಗ್ಗೆ ಮಾತನಾಡದೆ ಇದೀಗ ಮತ್ತೆ ತಮ್ಮ ಕರಪತ್ರದಲ್ಲಿ ರಾಮಮಂದಿರ ಕಟ್ಟಿದ್ದೇವೆ, ಮುಸ್ಲಿಮ್ ಮಹಿಳೆಯರಿಗೆ ನ್ಯಾಯ ಕೊಟ್ಟಿದ್ದೇವೆ ಎಂಬ ಮಾತುಗಳನ್ನು ಜನ ನಂಬುವ ಸ್ಥಿತಿಯಲ್ಲಿ ಇಲ್ಲ. ಭ್ರಷ್ಟಾಚಾರ ಮುಕ್ತಗೊಳಿಸುವುದಾಗಿ ಹೇಳಿ ದೇಶವನ್ನು ವಿಶ್ವಗುರು ಮಾಡುವುದಾಗಿ ಹೇಳಿದವರು ಇಂದು ಭ್ರಷ್ಟರನ್ನೆಲ್ಲಾ ಆಸೆ, ಆಮಿಷ ಒತ್ತಡಕ್ಕೆ ಸಿಲುಕಿ ತಮ್ಮ ಪಕ್ಷದ ವಾಶಿಂಗ್ ಮಿಶನ್ಗೆ ಇಳಿಸಿ ಪರಿಶುದ್ಧ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಅಭಿವೃದ್ಧಿ, ಬದುಕಿನ ಸಮಸ್ಯೆಗಳಬದಲಿಗೆ ಧರ್ಮಗಳ ಧ್ರುವೀಕರಣ, ತನ್ನ ರಾಜಕೀಯ ಟೂಲ್ ಕಿಟ್ ಗಾಇ ಹಿಂದುತ್ವವನ್ನೇ ಮುನ್ನಲೆಗೆ ತರಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಜನಸಾಮಾನ್ಯರು ತಕ್ಕ ಉತ್ತರ ನೀಡಬೇಕು ಎಂದು ಮುನೀರ್ ಕಾಟಿಪಳ್ಳ ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago