ಮಂಗಳೂರು : ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ವಿಧಾನ ಪರಿಷತ್  ಉಪಚುನಾವಣೆ : ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ

ಮಂಗಳೂರು:ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಕಿಶೋರ್ ಕುಮಾರ್ ಪುತ್ತೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾವು – vishwanews24

Leave a Reply