ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.
ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕನ ಪುತ್ರ ಉಸ್ಮಾನ್ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ವಿಚಾರದಲ್ಲಿ ಸ್ಥಳೀಯರು ಹಲ್ಲೆನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…