ಮಂಗಳೂರು: ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಆರೋಪಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ಸೋಮವಾರ ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ.
ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ. ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ. ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದರು. ಪೊಲೀಸರು ಕಾನೂನು ಮೀರಿ ಕೆಲಸ ಮಾಡಿದ್ದರೆ ಅದಕ್ಕೆ ಸರಕಾರ, ಕಾನೂನು, ನ್ಯಾಯಾಲಯವಿದೆ. ಪೊಲೀಸರು ಸುಮ್ಮನಾದರೆ ಏನೂ ಮಾಡಿಲ್ಲ ಎಂದು ಆರೋಪಿಸುವ ಬಿಜೆಪಿಗರು, ಪೊಲೀಸರು ತಮ್ಮ ಕೆಲಸ ಮಾಡಿದರೆ ಆಕ್ಷೇಪಿಸುತ್ತಾರೆ.
ಬಿಜೆಪಿಗರ ಉದ್ದೇಶವಾದರೂ ಏನು? ಜಿಲ್ಲೆ ಸದಾ ಅಶಾಂತಿಯಿಂದ ಕೂಡಿರಬೇಕೇ? ಅಭಿವೃದ್ಧಿಯು ಬಿಜೆಪಿಗೆ ಬೇಡವೇ? ಪೊಲೀಸ್ ಇಲಾಖೆಯಿಂದ ತಪ್ಪು ಆಗಿರುವುದಾದರೂ ಏನು? ಯಾರ ಮೇಲೆ ಸುಳ್ಳು ಕೇಸು ಹಾಕಲಾಗಿದೆ ಎಂಬುದನ್ನಾದರೂ ತಿಳಿಸಲಿ ಎಂದು ಸವಾಲು ಹಾಕಿದ ಐವನ್ ಡಿಸೋಜ, ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಚ್ಯುತಿತರುವ ಬಿಜೆಪಿ ಮುಖಂಡರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…