ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ರಘುಪತಿ ಭಟ್ ಪರ ಅವರು ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ತಿಲಾಂಜಲಿ ಇಟ್ಟು ಬಿಜೆಪಿ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ ಎಂದರು.
ಕರ್ನಾಟಕದಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆಗೆ ಸರಿಯುತ್ತಿರುವ ಸಂದರ್ಭ, ಪಕ್ಷ, ಹಿಂದುತ್ವ ಎಂದು ಬಯಸುವ ಎಲ್ಲ ಕಾರ್ಯಕರ್ತರು ರಘುಪತಿ ಭಟ್ ಪರ ಕೆಲಸ ಮಾಡಬೇಕು. ಬಿಜೆಪಿ ಶುದ್ಧೀಕರಣ ಆಗಬೇಕು. ರಘುಪತಿ ಗೆಲ್ಲುತ್ತಾರೆ. ಹಿಂದುತ್ವಕ್ಕೆ ಆಗುತ್ತಿರುವ ಅವಮಾನ, ರಘುಪತಿ ಭಟ್ ಹಾಗೂ ನನಗೆ ಆಗಿರುವ ಅನ್ಯಾಯ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಬಂದ ಅಭ್ಯರ್ಥಿ ಗೆ ಟಿಕೆಟ್ ನೀಡಿರುವುದಕ್ಕೆ ಅರ್ಥವೇ ಇಲ್ಲ. ಹಿಂದುತ್ವದ ನೆಲೆ ಸ್ವಾರ್ಥಿಗಳ ಕೈ ಸೇರಿದೆ. ಇದನ್ನು ಮತ್ತೆ ಪಡೆಯಲು ಎಲ್ಲರೂ ಕೆಲಸ ಮಾಡಬೇಕು ಎಂದರು.
ಇದು ವಿಶೇಷವಾದ ಚುನಾವಣೆ. ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತದಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದರೆ ರಾಜ್ಯದಲ್ಲಿ ಅದಕ್ಕೆ ತಿಲಾಂಜಲಿ ಇಟ್ಟು ಕಾರ್ಯ ನಿರ್ವಹಿಸುತ್ತಿದೆ. ಜನತಾ ಪಕ್ಷ ಕಟ್ಟಿದ್ದು ಇತಿಹಾಸ. ವಿಶ್ವವನ್ನು ಒಂದು ಗೂಡಿ ಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಕುಟುಂಬ ರಾಜಕೀಯದ ವಿರುದ್ಧ ಕೆಲಸ ಆಗುತ್ತಿದ್ದರೆ, ಕರ್ನಾಟಕದಲ್ಲಿ ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ಇದರ ನೋವಲ್ಲಿ ಕಾರ್ಯಕರ್ತರಿದ್ದಾರೆ ಎಂದರು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಮಿತಿಮೀರಿದೆ. ವಿಧಾನಸಭಾ ಚುನಾವಣೆಯ ವೇಳೆಯೂ 45 ವರ್ಷಗಳಿಂದ ನನ್ನ ಜೊತೆ ಕೆಲಸ ಮಾಡಿದ ಉಡುಪಿಯ ರಘುಪತಿ ಭಟ್ ಗೆ ನೋವಾಗಿದೆ. ನನಗಾದರೂ ದೆಹಲಿಯಿಂದ ಕರೆ ಬಂದಿತ್ತು. ರಘುಪತಿ ಭಟ್ ಗೆ ಅದೂ ಬಂದಿಲ್ಲ. ಅವರು ಪಕ್ಷ ನಿಷ್ಠೆ ಬಿಟ್ಟಿಲ್ಲ. ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ ಎಂದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…