ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಿರಿ ಹೇಳಿಕೆಗೆ ಸಚಿವ ಶ್ರೀರಾಮುಲು ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸಾಗಿದ್ದಾರೆ. ಹೀಗಾಗಿ ಬಿಜೆಪಿಯನ್ನು ಕಿತ್ತೊಗೆಯಿರಿ ಎಂದು ಹೇಳಿದ್ದು, ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ?, ಬಿಜೆಪಿ ರಾಜ್ಯದಲ್ಲಿ ದೇಶದಲ್ಲಿ ಆಲದ ಮರವಾಗಿ ಬೆಳೆದಿದೆ. ಬಿಜೆಪಿ ಕಾರ್ಮಿಕ ವರ್ಗಕ್ಕೆ ಶಕ್ತಿಯನ್ನು ತುಂಬಿದೆ. ಪ್ರಧಾನಿ ಮೋದಿ ದೇಶಕ್ಕೆ ಸಮರ್ಥ ನಾಯಕರಾಗಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ. ಐವತ್ತು ವರ್ಷವನ್ನು ಆಳಿದ ಕಾಂಗ್ರೆಸ್ ಪಕ್ಷವನ್ನು ದೇಶ ತಿರಸ್ಕಾರ ಮಾಡಿದೆ.
2023ರಲ್ಲಿ ಜನ ಆಲದಮರಕ್ಕೆ ನೀರೆರೆಯುವ ಮೂಲಕ ಮತ್ತಷ್ಟು ಎತ್ತರಕ್ಕೆ ಬೆಳೆಸುತ್ತಾರೆ. ರಾಜ್ಯದಲ್ಲಿ ಭಾವನಾತ್ಮಕ ಸಂಬಂಧ ಬೆಳೆಯುತ್ತಿದೆ. ಬೆಳವಣೆಗೆಗಳ ಬಗ್ಗೆ ಮುಖ್ಯಮಂತ್ರಿ ಗಳು ಸ್ಪಷ್ಟ ಉತ್ತರ ನೀಡಿದ್ದಾರೆ. ಎಲ್ಲಾ ಧರ್ಮೀಯರಿಗೂ ಗೌರವ ಕೊಡುವ ಕೆಲಸ ಮಾಡಿದ್ದಾರೆ. ಕಾನೂನನ್ನು ಕಾಪಾಡುವ ಕೆಲಸ ಎಲ್ಲರೂ ಮಾಡಬೇಕು ಎಂದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…