ಮಂಗಳೂರು: ಮಂಗಳೂರು ವಿಧಾನ ಸಭೆ ಕ್ಷೇತ್ರದ ಪಜೀರ್ ಗ್ರಾಮದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷ , ಬಿಜೆಪಿಯ ಯುವ ನಾಯಕ ನ್ಯಾಯಾವಾದಿ ಮಹಮ್ಮದ್ ಅಸ್ಗರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಜ.11ರ ಮಂಗಳವಾರದಂದು ಅಮಾನತು ಮಾಡಲಾಗಿದೆ.
ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಈ ತತ್‌ಕ್ಷಣದಿಂದ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಮಾನತು ಮಾಡಿರುವ ಆದೇಶವನ್ನು ಮಹಮ್ಮದ್ ಅಸ್ಗರ್ ಹಾಗೂ ಮಂಗಳೂರು ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಕಾಂತ್ ಪಂಡಿತ್ ಹೌಸ್ ಅವರಿಗೆ ಪತ್ರ ಬರೆದು ಸುದರ್ಶನ್ ತಿಳಿಸಿದ್ದಾರೆ.
ವಿಟ್ಲದ ಸಾಲೆತ್ತೂರಿನ ಜ. 6 ರಂದು ನಡೆದ ಔತಣಕೂಟದಲ್ಲಿ ಭಾಗವಹಿಸಿದ ಅನ್ಯಕೋಮಿನ ಮದುಮಗ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸುತ್ತಿದ್ದ ವಿಟ್ಲ ಠಾಣೆ ಪೊಲೀಸರು ಮದುಮಗ ಬಾಷಿತ್ ಸಹೋದರ ಅರ್ಷಾದ್ ನನ್ನು ಜ .8 ರಂದು ಮಂಜೇಶ್ವರದದ ವಶಕ್ಕೆ ಪಡೆದು ವಿಟ್ಲ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದರು . ಬಳಿಕ ಸಂಜೆ ವೇಳೆ ಆತನನ್ನು ಬಿಟ್ಟು ಕಳುಹಿಸಿದ್ದರು. ಆರೋಪಿಯ ಸಹೋದರನ ಬಿಡುಗಡೆಯಲ್ಲಿ ಮಹಮ್ಮದ್ ಅಸ್ಗರ್ ಕೈವಾಡವಿದೆಯೆಂಬ ಗುಲ್ಲು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಮುಖಂಡರಲ್ಲಿ ಅಸ್ಗರ್ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದಾದ ಬಳಿಕ ಇದೀಗ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮಹಮ್ಮದ್ ಅಸ್ಗರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…