ಮಂಗಳೂರು: ಪಿಎಫ್ಐ, ಎಸ್‌ಡಿಪಿಐ ಬ್ಯಾನ್‌ಗೆ ಕಾಂಗ್ರೆಸ್ ಕರೆ ನೀಡಿದ್ದಲ್ಲಿ ನೂರಕ್ಕೆ ನೂರು ಪ್ರತಿಶತ ಅವರ ಅಭಿಪ್ರಾಯದೊಂದಿಗೆ ಜೊತೆಗೂಡುತ್ತೇವೆ. ರಾಷ್ಟ್ರವಿರೋಧಿಗಳ ವಿರುದ್ಧ ಯಾರು ಹೋರಾಡುತ್ತಾರೋ ಅವರೊಂದಿಗೆ ನಾವು ಕೈಜೋಡಿಸುತ್ತೇವೆ. ಮುಸ್ಲಿಂ ಸಂಘಟನೆ ಈ ಬಗ್ಗೆ ಕರೆ ನೀಡಿದರೂ ನಾವು ಸಹಮತ ಸೂಚಿಸುತ್ತೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಸಾವರ್ಕರ್ ಫೋಟೋ ಅಳವಡಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಮಂಗಳೂರಿನ ಗುರುಪುರದಲ್ಲಿ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ರಾದ್ಧಾಂತ ಸೃಷ್ಟಿ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಬಿಜೆಪಿ ಸರಕಾರ ಎರಡೂ ಸಂಘಟನೆಗಳನ್ನು ತಕ್ಷಣ ಬ್ಯಾನ್ ಮಾಡಬೇಕು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಬಗ್ಗೆ ಇನ್ನಷ್ಟು ವಿಚಾರಗಳನ್ನು ಹಂಚುವ ಮೂಲಕ ಅಭಿಯಾನ ಕೈಗೊಳ್ಳಲಾಗುತ್ತದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂಘಟನೆಗಳನ್ನು ನಿಷೇಧ ಮಾಡದಿದ್ದಲ್ಲಿ ಸಮಾಜ ಬಹಳ ದೊಡ್ಡ ಅಪಾಯವನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುತ್ತಿಲ್ಲ ಎಂಬುದನ್ನು ನಾವು ಒಪ್ಪೋದಿಲ್ಲ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ಖಂಡಿತಾ ಆ ಮಟ್ಟಕ್ಕೆ ಅದು ಇಳಿಯಲಿಕ್ಕಿಲ್ಲ ಎಂಬ ವಿಶ್ವಾಸವಿದೆ. ಈ ವಿಚಾರಗಳಲ್ಲಿ ಬಿಜೆಪಿಯೊಂದಿಗೆ ನಮ್ಮ ಭಿನ್ನತೆಯಿದೆ. ದೇಶವಿರೋಧಿ ಸಂಘಟನೆಗಳ ಬ್ಯಾನ್ ವಿಚಾರದಲ್ಲಿ ಬಿಜೆಪಿ ನಮ್ಮ ಪಕ್ಷ ಎಂದು ನಾವು ಅದಕ್ಕೆ ಬೆಂಬಲ ನೀಡುವುದಿಲ್ಲ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು
ಸುರತ್ಕಲ್ ಫಾಝಿಲ್ ಹತ್ಯೆಯನ್ನು ನಾವು ಸಮರ್ಥನೆ ಮಾಡೋದಿಲ್ಲ. ಆದರೆ ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಹಿಂದೂಗಳ ಹತ್ಯೆಯಾಗುತ್ತಿದೆ. ಇದರಿಂದ ಹಿಂದೂ ಯುವಕರಲ್ಲಿ ಆಕ್ರೋಶ ನಿರ್ಮಾಣವಾಗಿದೆ. ಯಾವುದೇ ಕೃತ್ಯದಲ್ಲಿ ಗುರುತಿಸಿಕೊಳ್ಳದ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಅದರ ಪ್ರತಿಫಲ ಸುರತ್ಕಲ್ ಫಾಝಿಲ್ ಕೊಲೆಯಲ್ಲಿ ಕೊನೆಗೊಂಡಿದೆ. ಹತ್ಯೆಯನ್ನು ನಾವು ಸಮರ್ಥಿಸೋದಿಲ್ಲ. ಆದರೆ ಹಿಂದೂ ಸಮಾಜ ಎಂದೂ ಕೈಕಟ್ಟಿ ಕೂರೋದಿಲ್ಲ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಬ್ರಹ್ಮಗಿರಿ ಸರ್ಕಲ್ ನಲ್ಲಿ ಅಳವಡಿಸಿದ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದ ಯಶ್ಪಾಲ್ ಸುವರ್ಣ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…