Featured

ಮಂಗಳೂರು : ಬಿಜೆಪಿ ಶಾಸಕರ ಜೊತೆ ಇರುವ ಫೋಟೊ ವೈರಲ್ : ಮಹಿಳೆಯಿಂದ ದೂರು ದಾಖಲು – Vishwanews24

ಮಂಗಳೂರು : ಬಿಜೆಪಿ ಶಾಸಕರ ಜೊತೆ ಇರುವ ಫೋಟೊ ವೈರಲ್ : ಮಹಿಳೆಯಿಂದ ದೂರು ದಾಖಲು

ಪುತ್ತೂರು: ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಏ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ, “ನನ್ನ ವೈಯುಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಂಡು ವೈರಲ್ ಮಾಡುತ್ತಿದ್ದಾರೆ. ಇದರಿಂದಾಗಿ ನನಗೆ ಮತ್ತು ಮನೆ ಮಂದಿಗೆ ತುಂಬಾ ನೋವಾಗಿದ್ದು, ಮಹಿಳೆಯಾಗಿ ನನ್ನ ಮೇಲೆ ದೌರ್ಜನ್ಯ ಮಾಡುವುದು ತಪ್ಪು” ಎಂದಿದ್ದಾರೆ.

ಇನ್ನು “ನನಗೂ ಶಾಸಕರಿಗೆ ಯಾವುದೇ ರೀತಿಯ ಸಂಬಂಧವಿಲ್ಲ. ಅದೂ ಅಲ್ಲದೆ ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇದರ ಹಿಂದೆ ಇರುವವರ ವಿರುದ್ದ ಸೂಕ್ತ ಶಿಕ್ಷೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪೋಟೊವನ್ನು ನಕಲು ಮಾಡಲಾಗಿದೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೋಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago