ಮಂಗಳೂರು: ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುವ ಮೂಲಕ ಸಂಭ್ರಮಿಸಿರುವ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ದ ತನಿಖೆ ನಡೆಸಲಾಗುತ್ತಿದ್ದು, ಅವರ ಬಂಧನವಾಗಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ರೀತಿಯ ಕಾಮೆಂಟ್‌ಗಳನ್ನು ಮೂರು ಖಾತೆಗಳಲ್ಲಿ ಹಾಕಿರುವುದು ತಿಳಿದು ಬಂದಿದ್ದು, ಇದು ನಕಲಿ ಖಾತೆಯ ಹಾಗೂ ಯಾಕೆ ಈ ರೀತಿಯ ಕಾಮೆಂಟ್‌ಗಳನ್ನು ಹಾಕುತ್ತಿದ್ದಾರೆ ಎಂಬುದನ್ನು ನಾವು ತನಿಖೆ ಮಾಡುತ್ತೇವೆ” ಎಂದರು.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505(1ಎ), 505(2) ಮತ್ತು 505(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…