Featured

ಮಂಗಳೂರು: ಬಿಲ್ಲವ ಸಮುದಾಯದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 41 ದಿನಗಳ ಐತಿಹಾಸಿಕ ಪಾದಯಾತ್ರೆ : ಶ್ರೀ ಪ್ರಣವಾನಂದ ಸ್ವಾಮೀಜಿ – vishwanews24

ಮಂಗಳೂರು: ಬಿಲ್ಲವ ಸಮುದಾಯದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 41 ದಿನಗಳ ಐತಿಹಾಸಿಕ ಪಾದಯಾತ್ರೆ : ಶ್ರೀ ಪ್ರಣವಾನಂದ ಸ್ವಾಮೀಜಿ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋ.ರೂ. ಬಿಡುಗಡೆ, ಬಿಲ್ಲವ ಸಮಾಜವನ್ನು ಈಗಿರುವ 2ಎ ಯಿಂದ ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡುವುದೂ ಸೇರಿದಂತೆ ಪ್ರಮುಖ ಹಾಗೂ ದೀರ್ಘಕಾಲಿಕ ಬೇಡಿಕೆಗಳನ್ನು ಮುಂದಿರಿಸಿ 41 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳ ಪೀಠಾಧಿಪತಿ ಡಾ| ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿ ದಂತೆ 26 ಪಂಗಡಗಳ ಬೇಡಿಕೆಗಳ ಈಡೇರಿಕೆಗಾಗಿ ಅವುಗಳ ಮುಖಂಡರ ಬೆಂಬಲದಡಿ 2026 ರ ಜನವರಿ 6 ರಿಂದ ಕರದಾಳದಿಂದ ಬೆಂಗಳೂರು ವರೆಗೆ 41 ದಿನಗಳ 700 ಕಿ.ಮೀ ನ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ ಎಂದರು.

ಕುಲಕಸುಬು ಕಳೆದು ಕೊಂಡ ಈಡಿಗರಿಗೆ ಭೂಮಿ ಮಂಜೂರು, ಬೆಂಗಳೂರಿನ ವಿಧಾನ ಸೌಧ ಎದುರು ನಾರಾಯಣಗುರುಗಳ ಪುತ್ಥಳಿ ಸ್ಥಾಪನೆ ಸೇರಿದಂತೆ ಬೇಡಿಕೆಗಳನ್ನು ಅವರು ಉಲ್ಲೇಖೀಸಿದರು.

ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿರುವ ಮೊಕ ದ್ದಮೆಗಳನ್ನು ಹಿಂತೆಗೆದು ದೇವ ಸ್ಥಾನಕ್ಕೆ ಭದ್ರತೆ ಒದಗಿಸಬೇಕು, ಕೋಟಿ ಚೆನ್ನಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗೆ ಪ್ರತಿ ಬಜೆಟ್‌ನಲ್ಲಿ ಸಮರ್ಪಕ ಅನುದಾನ ನೀಡಬೇಕು, ವಿಶ್ವವಿದ್ಯಾಲಯಗಳಲ್ಲಿ ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪನೆ ಹಾಗೂ ಹೆಂಡದ ಮಾರಯ್ಯ ಜಯಂತಿ ಯನ್ನು ಅಧಿಕೃತವಾಗಿ ಆಚರಿಸುವಂತೆ ಸರಕಾರಕ್ಕೆ ಮನವಿ ಮಾಡಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಹೆಸರಿಡು ವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದ ಅವರು, ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ರಾಜ್ಯದಲ್ಲಿ ಶೇಂದಿ ಇಳಿಕೆಗೆ ನಿಷೇಧವಿದೆ. ಹಾಗಾಗಿ ನಮ್ಮ ಸಮುದಾಯದವರು ಉದ್ಯೋಗ ಕಳೆದುಕೊಂಡಿದ್ದಾರೆ. ಹಾಗಾಗಿ ಮದ್ಯವ್ಯಾಪಾರದದಲ್ಲಿ ನಮ್ಮ ಪಂಗಡದವರಿಗೆ ಮೀಸಲು ಕೊಡಿ. ಒಂದುವೇಳೆ ಮದ್ಯ ಬೇಡವೆಂದಾದರೆ ಪಬ್, ಬಾರ್ ಎಲ್ಲವನ್ನೂ ಬಂದ್ ಮಾಡಿ ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago