Featured

ಮಂಗಳೂರು: ಬೀಡಿ ಕಾರ್ಮಿಕರ ಕಲ್ಯಾಣಕ್ಕೆ ಪ್ರತ್ಯೇಕ ಕಾನೂನುರೂಪಿಸಬೇಕು  : ವೀರಪ್ಪ ಮೊಯ್ಲಿ – Vishwanews24

ಮಂಗಳೂರು: ಬೀಡಿ ಕಾರ್ಮಿಕರ ಕಲ್ಯಾಣಕ್ಕೆ ಪ್ರತ್ಯೇಕ ಕಾನೂನುರೂಪಿಸಬೇಕು  : ವೀರಪ್ಪ ಮೊಯ್ಲಿ

ಮಂಗಳೂರು : ಬೀಡಿ ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರಕಾರ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್‍ಸ್ ಯೂನಿಯನ್ (ಎಚ್‌ಎಂಎಸ್ ಸಂಯೋಜಿತ) ಆಶ್ರಯದಲ್ಲಿ ನಗರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ಜರಗಿದ ಬೀಡಿ ಕಾರ್ಮಿಕರ ಸಮಾವೇಶ ಹಾಗೂ ಬೀಡಿ ಬದುಕು ಅಧ್ಯಯನ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಬೀಡಿ ಉದ್ಯಮ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರ್ಥಿಕತೆಗೆ ವಿಶೇಷ ಶಕ್ತಿಯಾಗಿ ಮೂಡಿಬಂದಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ ಸ್ವಾವಲಂಬಿ, ಸ್ವಾಭಿಮಾನದ ಬದುಕು ಕಲ್ಪಿಸಿಕೊಟ್ಟಿದೆ ಎಂದರು. ಬೀಡಿ ಉದ್ಯಮಕ್ಕೆ ಪ್ರಸ್ತುತ ಶೇ.೨೮ ಜಿಎಸ್‌ಟಿ ವಿಧಿಸಿರುವುದು ಕಾರ್ಮಿಕರಿಗೆ, ಉದ್ಯಮಕ್ಕೆ ಬಹುದೊಡ್ಡ ಹೊಡೆತ ನೀಡಲಿದೆ. ಅದುದರಿಂದ ಬೀಡಿ ಉದ್ಯಮಕ್ಕೆ ಜಿಎಸ್‌ಟಿಯಿಂದ ಸಂಪೂರ್ಣ ವಿನಾಯತಿ ನೀಡಬೇಕು.ಬೀಡಿ ಉದ್ದಿಮೆದಾರರು ಉದ್ಯಮವನ್ನು ಮುನ್ನಡೆಸಿಕೊಂಡು ಬಂದು ಬಹುದೊಡ್ಡ ಸಂಖ್ಯೆಯಲ್ಲಿ ಉದ್ಯೋಗ ಒದಗಿಸಿದ್ದು ಅವರಿಗೆ ಅಭಿನಂದನೆಯನ್ನು ಸಲ್ಲಿಸಲೇ ಬೇಕು ಎಂದವರು ಹೇಳಿದರು.

ಶಾಸಕ ಯು.ಟಿ.ಖಾದರ್ ಅವರು ಮಾತನಾಡಿ ಬೀಡಿ ಕಾರ್ಮಿಕರ ಕಲ್ಯಾಣಕ್ಕೆ ಬೀಡಿ ಕಾರ್ಮಿಕರ ಅಭಿವೃದ್ಧಿ ಮಂಡಳಿಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೂಪಿಸಬೇಕು ಎಂದು ಹೇಳಿದರು. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ ಬೀಡಿ ಕಾರ್ಮಿಕರು, ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆದು ಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ ಎಂದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಮಾತನಾಡಿ ಬೀಡಿ ಕಾರ್ಮಿಕರು ಸಂಘಟಿತರಾಗಿ ಪ್ರಬಲ ಹೋರಾಟ ನಡೆಸಿದಾಗ ಬೇಡಿಕೆಗಳು ಈಡೇರಲು ಸಾಧ್ಯವಾಗುತ್ತದೆ ಎಂದರು.ಗಣೇಶ್ ಬೀಡಿ ಸಂಸ್ಥೆಯ ಪಾಲುದಾರ ಕಾಳಿದಾಸ್, ಮಂಗಳೂರು ಅಂಚೆ ಅಧೀಕ್ಷಕ ಶ್ರೀಹರ್ಷ ಅವರು ಬೀಡಿ ಕಾರ್ಮಿಕರಿಗೆ ಜೀವನ್ ಪ್ರಮಾಣ ಪತ್ರದ ಬಗ್ಗೆ ವಿವರಿಸಿದರು.

ಪ್ರಸ್ತಾವನೆಗೈದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಮಹಮ್ಮದ್ ರಫಿ ಅವರು ದೇಶದಲ್ಲಿ 4.5 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತಿರುವ ಬೀಡಿ ಉದ್ಯಮವನ್ನು ಉಳಿಸಲು ಸರಕಾರ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು, ಬೀಡಿ ಕಾರ್ಮಿಕರಿಗೆ ಇಲಾಖೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು. ಎಚ್‌ಎಂಎಸ್ ರಾಜ್ಯಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಬೀಡಿ ಉದ್ಯಮಿ , ಅಪೂರ್ವ ವಸ್ತುಗಳ ಸಂಗ್ರಾಹಕ ಯಾಸೀರ್ ಕಲ್ಲಡ್ಕ ,ಬೀಡಿ ವರ್ಕರ್ಸ್ ಯೂನಿಯನ್ ್ ಮಹಮ್ಮದ್ ರಫಿ ಅವರನ್ನು ಸಮ್ಮಾನಿಸಲಾಯಿತು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿರೂಪಿಸಿದರು. ಮುರಲೀಧರ ಕಾಮತ್ ಆಶಯ ಗೀತೆ ಹಾಡಿದರು. ಹರೀಶ್ ಕೆ.ಎಸ್. ವಂದಿಸಿದರು. ಸಂಘಟನೆಯ ಇಸ್ಮಾಯಿಲ್ ಡಿ.ಎಸ್. ಸಂಜೀವ ಪೂಜಾರಿ, ಪ್ರಶಾಂತ್, ಪಿ.ಎಚ್.ಮೊಹಮ್ಮದ್ , ಸಯ್ಯದ್ ಹುಸೈನ್ ಕೋಯಾ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago