ಮಂಗಳೂರು: ಬುರ್ಕಾ ಧರಿಸಿ ಹಿಂದಿ ಐಟಂ ಸಾಂಗ್‌ಗೆ ಸ್ಟೆಪ್ ಹಾಕಿದ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ಮಂಗಳೂರಿನ ವಾಮಂಜೂರು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿನ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಾಂಶುಪಾಲ ಡಾ.ಸುಧೀರ್ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ.
ಈ ಡ್ಯಾನ್ಸ್ ಅನ್ನು ಮುಸ್ಲಿಂ ವಿದ್ಯಾರ್ಥಿಗಳೇ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಡ್ಯಾನ್ಸ್ ಮಾಡಿದ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದ್ದು, ವೈರಲ್ ಆಗಿದೆ. ಈ ವೇಳೆ ಇದು ಮುಸ್ಲಿಂ ಸಮುದಾಯದವರ ಆಕ್ರೋಶಕ್ಕೆ ಗುರಿಯಾಗಿದೆ. ಅಲ್ಲದೆ, ಕಾಲೇಜಿನ ಮೇಲೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಬುರ್ಕಾ ಹಾಕಿಕೊಂಡು ಡ್ಯಾನ್ಸ್ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸುಧೀರ್ ಅವರು ನಾಲ್ಕೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಮುಂದಿನ ವಿಚಾರಣೆವರೆಗೆ ಈ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಹೇಳಿದ್ದಾರೆ. ಅಲ್ಲದೆ, ಯಾವುದೇ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವ ಯಾವುದೇ ರೀತಿಯ ಚಟುವಟಿಕೆಯನ್ನು ಬೆಂಬಲಿಸುವುದಿಲ್ಲ ಹಾಗೂ ಆಯೋಜನೆಗೆ ಅವಕಾಶ ಕೊಡುವುದಿಲ್ಲ. ಕ್ಯಾಂಪಸ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮ ಕಾಲೇಜಿನ ನೀತಿಯನ್ನು ಅಳವಡಿಕೆ ಮಾಡಿಕೊಳ್ಳುವುದು ಕಡ್ಡಾಯ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…