ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿಯ ಬಿಎ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸೀ ಬರ್ಡ್ ಅಪಘಾತದ ನಂತರ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದು ನಂ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಪರಿಣಾಮ ಬಸ್ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗತೊಡಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ನೀರು ಸಿಂಪಡಿಸಿ, ಅಪಘಾತದಿಂದ ಹೆಚ್ಚಿನ ಹಾನಿಯಾಗದಂತೆ ಕ್ರಮಕೈಗೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…