Featured

ಮಂಗಳೂರು – ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ – vishwanews24

ಮಂಗಳೂರು – ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ

ಮಂಗಳೂರು : ಸಕಲೇಶಪುರ ಘಾಟ್ ಸೆಕ್ಷನ್ ನಲ್ಲಿ ವಿದ್ಯುಧೀಕರಣ ಪೂರ್ಣಗೊಂಡ ಬೆನ್ನಲ್ಲೇ ಇದೀಗ ಮಂಗಳೂರು ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಆಗ್ರಹ ಕೇಳಿಬಂದಿದೆ.

ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು ಬೆಂಗಳೂರು ನಡುವೆ ಪ್ರತಿದಿನ 3 ವಂದೇ ಭಾರತ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ.

ಪ್ರಸ್ತುತ ಸಾವಿರಾರು ಉದ್ಯಮಿಗಳು ಮತ್ತು ವೃತ್ತಿಪರರು ಕೇವಲ ಕೆಲವೇ ಗಂಟೆಗಳ ಕೆಲಸಕ್ಕಾಗಿ ರಾತ್ರಿ ಪೂರ್ತಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಇದು ನಮ್ಮ ಶ್ರಮಜೀವಿ ಜನರಿಗೆ ಆಗುತ್ತಿರುವ ಅನ್ಯಾಯ.

ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ ಈ ಕೆಳಗಿನಂತೆ ವಂದೇ ಭಾರತ್  ರೈಲುಗಳನ್ನು ಆರಂಭಿಸಲು ಕೋರಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಅದರಂತೆ, ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ 03 ವಂದೇ ಭಾರತ್ ರೈಲುಗಳ ಸೇವೆ ಒದಗಿಸುವಂತೆ ಉಲ್ಲೇಖಿಸಿದ್ದೇನೆ.

ಈ ರೈಲು ಸಂಪರ್ಕವು ಕೇವಲ ಪ್ರಯಾಣವನ್ನಷ್ಟೇ ಅಲ್ಲದೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೂ ದೊಡ್ಡ ಚೈತನ್ಯ ನೀಡಲಿದೆ. ಕರಾವಳಿ ಜನರ ಈ ನ್ಯಾಯಯುತ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸ ಇರಿಸಿದ್ದೇನೆ ಎಂದಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago