ಮಂಗಳೂರು,: ಕರಾವಳಿಯಿಂದ ರಾಜ್ಯ ರಾಜಧಾನಿಯನ್ನು ಸಂಪರ್ಕಿಸುವ ಬೆಂಗಳೂರು– ಮಂಗಳೂರು ನಡುವೆ ವಾರಕ್ಕೆ ಮೂರು ದಿನ ರಾತ್ರಿ ಸಂಚರಿಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಗೆ ಇದೇ 21ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ದೊರೆಯಲಿದೆ.
ವಾರಕ್ಕೆ ಮೂರು ಬಾರಿ ಸಂಚರಿಸಲಿರುವ ಮಂಗಳೂರು ಸೆಂಟ್ರಲ್– ಯಶವಂತಪುರ ಎಕ್ಸ್‌ಪ್ರೆಸ್ ರೈಲಿಗೆ ಫೆ. 21 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಹಸಿರು ನಿಶಾನೆ ತೋರಲಿದ್ದಾರೆ.
ಹೊಸ ರೈಲು ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಶನಿವಾರ, ಸೋಮವಾರ ಹಾಗೂ ಬುಧವಾರ ಬೆಳಗಿನ ಜಾವ 4ಕ್ಕೆ ಮಂಗಳೂರು ತಲುಪಲಿದೆ.
ಮಂಗಳೂರಿನಿಂದ ಹೊರಡುವ ರೈಲು ಶನಿವಾರ, ಸೋಮವಾರ, ಬುಧವಾರಗಳಂದು ರಾತ್ರಿ 7 ಗಂಟೆಗೆ ಹೊರಟು ಮುಂಜಾನೆ 4.30ಕ್ಕೆ ಯಶವಂತಪುರ ತಲುಪಲಿದೆ. ನೂತನ ರೈಲಿನಿಂದಾಗಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…