Featured

ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ – vishwanews24

ಮಂಗಳೂರು – ಬೆಂಗಳೂರು ಹೆಚ್ಚುವರಿ ರೈಲು ಸಂಚಾರ : ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ

ಮಂಗಳೂರು : ಮಂಗಳೂರು ಬೆಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಗಳು ಗುಡ್ಡ ಕುಸಿತದಿಂದ ಹಾನಿಯಾಗಿದ್ದು, ರಸ್ತೆ ಸಂಪರ್ಕ ಬಹುತೇಕ ಬಂದ್ ಆಗಿರುವ ಹಿನ್ನಲೆ ಸಂಸದ ಬ್ರಿಜೇಶ್ ಚೌಟ ರೈಲ್ವೆ ಇಲಾಖೆಗೆ ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರಕ್ಕೆ ಒತ್ತಾಯಿಸಿದ್ದಾರೆ. ಇದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ.

ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಂ ಅವರಿಗೆ ಈ ಸಂಬಂಧ ಸಂಸದರು ಪತ್ರ ‌ಬರೆದಿದ್ದಾರೆ.

ಮಂಗಳೂರು- ಬೆಂಗಳೂರು ನಗರಗಳ ನಡುವೆ ಪ್ರತಿನಿತ್ಯ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದೆ. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಚೌಟ ವಿನಂತಿಸಿದ್ದಾರೆ.

ಈ ಹಿನ್ನಲೆ ಇದೀಗ ನೈಋತ್ಯ ರೈಲ್ವೆ ವಿಭಾಗ ಸಂಸದರ ಮನವಿಗೆ ಸ್ಪಂದಿಸಿದ್ದು, ಮಂಗಳೂರು ಬೆಂಗಳೂರು ಮಂಗಳೂರಿಗೆ ಹೆಚ್ಚುವರಿ ರೈಲು ಸಂಚರಿಸಲಿದೆ.

ಟ್ರೈನ್ ನಂಬರ್ 06547/06548 ಬೆಂಗಳೂರು – ಮಂಗಳೂರು ಜಂಕ್ಷನ್ – ಯಶವಂತ ಪುರ ನಡುವೆ ರೈಲು ಸಂಚರಿಸಲಿದೆ.

ಜುಲೈ 19 ರಂದು ಟ್ರೈನ್ ನಂಬರ್ 06547 – ಬೆಂಗಳೂರಿನಿಂದ ಮಂಗಳೂರಿಗೆ
ಜುಲೈ 20 ರಂದು ಟ್ರೈನ್ ನಂಬರ್ 06548 – ಮಂಗಳೂರಿನಿಂದ ಯಶವಂತಪುರ ಜಂಕ್ಷನ್

ಟ್ರೈನ್ ನಂಬರ್ 06548/06550 ಯಶವಂತಪುರ – ಮಂಗಳೂರು ಜಂಕ್ಷನ್ -ಯಶವಂತಪುರ ರೈಲು ಜುಲೈ 21 ಮತ್ತು 22 ರಂದು ಸಂಚರಿಸಲಿದೆ.

ಜುಲೈ 21 ಮತ್ತು 22 ರಂದು ಟ್ರೈನ್ ನಂಬರ್ 06549 – ಯಶವಂತಪುರ – ಮಂಗಳೂರು ಜಂಕ್ಷನ್
ಜುಲೈ 21 ಮತ್ತು 22 ರಂದು ಟ್ರೈನ್ ನಂಬರ್ 06550 – ಮಂಗಳೂರು ಜಂಕ್ಷನ್ – ಯಶವಂತಪುರ

ರೈಲಿನ ಬಗ್ಗೆ ಹೆಚ್ಚಿನ ಮಾಹಿತಿಗೆ ರೈಲ್ವೆ ಇಲಾಖೆಯ ಟೋಲ್ ಫ್ರೀ ನಂಬರ್ ಗೆ ಕಾಲ್ ಮಾಡಬಹುದು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago