Featured

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನ : ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ – Vishwanews24

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನ :  ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ

ಮಂಗಳೂರು: ಬೇರೆಯವರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಶಿಕ್ಷೆಗೊಳಗಾದ ಅಪರಾಧಿ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ ಪಾಸ್‌ಪೋರ್ಟ್‌ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದ. ಈ ಪಾಸ್‌ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್‌ಗೆ ನೀಡಿದ್ದರು.

ಇಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್‌ ಅವರನ್ನು ಖುಲಾಸೆಗೊಳಿಸಲಾಗಿದೆ.

Vishwa News 24

Recent Posts

ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ – vishwanews24

ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ ಮಂಗಳೂರು: ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ…

24 minutes ago

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ: ಉಡುಪಿಯ ಬೀಡಿನಗುಡ್ಡೆ ಹುಲ್ಲಿಕೇರಿ ಪರಿಸರದಲ್ಲಿ ವಾಸವಾಗಿದ್ದ ಐಶ್ವರ್ಯ (18) ಎನ್ನುವ ಯುವತಿಯು ಮನೆಗೆಲಸ…

29 minutes ago

ಮೈಸೂರು ದಸರಾ ಸಂಭ್ರಮಕ್ಕೆ ಕೆಎಸ್‌ಆರ್‌ಟಿಸಿ ಸಜ್ಜು: 3,000 ಬಸ್‌ಗಳ ವ್ಯವಸ್ಥೆ, ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ – vishwanews24

ಮೈಸೂರು ದಸರಾ ಸಂಭ್ರಮಕ್ಕೆ ಕೆಎಸ್‌ಆರ್‌ಟಿಸಿ ಸಜ್ಜು: 3,000 ಬಸ್‌ಗಳ ವ್ಯವಸ್ಥೆ, ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ …

34 minutes ago

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago