ಮಂಗಳೂರು: ಬೇರೆಯವರ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
ಬಂಟ್ವಾಳ ಸರಪಾಡಿ ಗ್ರಾಮದ ನಿವಾಸಿ ಬದ್ರುದ್ದೀನ್ ಶಿಕ್ಷೆಗೊಳಗಾದ ಅಪರಾಧಿ. 2010ರ ಫೆ.2ರಂದು ಹಸೈನಾರ್‌ಗೆ ಸೇರಿದ ಪಾಸ್‌ಪೋರ್ಟ್‌ನಲ್ಲಿ ದುಬೈಗೆ ಹೋಗಲು ಯತ್ನಿಸಿದ್ದ. ಈ ಪಾಸ್‌ಪೋರ್ಟ್ ಅನ್ನು ಅಬ್ಬಾಸ್ ಅವರು ಬದ್ರುದ್ದೀನ್‌ಗೆ ನೀಡಿದ್ದರು.
ಇಮಿಗ್ರೇಷನ್ ಅಧಿಕಾರಿ ಕೆ.ಎಂ. ಚಂದ್ರಶೇಖರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…