Featured

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ; ಸವಾರ ಮೃತ್ಯು.. Vishwanews24

ಮಂಗಳೂರು : ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ.

ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಸಾವ್ಯೊ  ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ.  ‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.

ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ‌ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago