ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ.
ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಸಾವ್ಯೊ ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ. ‘ಯುವಕರಿಬ್ಬರು ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಗೇಟ್ ಎದುರಿನ ತೆರೆದ ರಸ್ತೆ ವಿಭಜಕದ ಬಳಿ ಬೈಕಿನಲ್ಲಿ ‘ಯು ಟರ್ನ್ ತೆಗೆದು ಮುಂದೆ ಸಾಗುತ್ತಿದ್ದರು. ಅಷ್ಟರಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅವರ ಬೈಕಿಗೆ ಡಿಕ್ಕಿ ಹೊಡೆದಿತ್ತು. ಮಹೇಶ್ ಅವರ ಮೂಗು, ಎಡ ಕೈ, ಎಡ ಕಾಲಿನ ಗಂಟು ಹಾಗೂ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು.
ಸ್ಥಳದಲ್ಲಿದ್ದವರು ಅವರನ್ನು ವಾಹನವೊಂದರಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರ ಪ್ರಣಮ್ ಶೆಟ್ಟಿ ಅವರ ತಲೆಗೆ, ಬಲಕೈಗೆ, ಎಡ ತೋಳಿಗೆ, ಎಡಮೊಣ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ನಾಸಿರ್ ಎಂಬುವರು ತಮ್ಮ ಆಟೊರಿಕ್ಷಾದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಸಿರ್ ನೀಡಿದ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…