ಮಂಗಳೂರು : ಬೈಕ್ ಗೆ ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು – vishwanews24
ಮಂಗಳೂರು : ಬೈಕ್ ಗೆ ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು : ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ರಾ.ಹೆ.75ರ ಪಡೀಲ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ. ಅಡ್ಯಾರ್ ಕಣ್ಣೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು, ಚಾಲಕಿಯ ನಿಯಂತ್ರಣ ತಪ್ಪಿ ಪಡೀಲ್ ನ ಖಾಸಗಿ ಆಸ್ಪತ್ರೆಯಿಂದ ಹೆದ್ದಾರಿಗೆ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
