ಮಂಗಳೂರು: ಬೈಕ್ ಸ್ಕಿಡ್ ಆಗಿ ಪಲ್ಟಿ; ಸವಾರರಿಬ್ಬರು ಸ್ಥಳದಲ್ಲೇ ಸಾವು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬೈಕ್ ಸ್ಕಿಡ್ ಆಗಿ ಪಲ್ಟಿ; ಸವಾರರಿಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಬೈಕೊಂದು ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಮಂಗಳೂರಿನ ಯೆಯ್ಯಾಡಿ ಬಳಿ ಸಂಭವಿಸಿದೆ.

ಮೃತರನ್ನು ರಾಮಕುಂಜದ ಚೇತನ್ ಹಾಗೂ ಉರ್ವಾಸ್ಟೋರ್ ನ ಕಾಶಿ ಎಂದು ಗುರುತಿಸಲಾಗಿದೆ.

ಸವಾರರು ಇಂದು ಮುಂಜಾನೆ 3ರ ಸುಮಾರಿಗೆ ಶಕ್ತಿನಗರದಿಂದ ಬರುತ್ತಿದ್ದ ವೇಳೆಗೆ ಮಳೆಯ ಕಾರಣದಿಂದ ಬೈಕ್ ಸ್ಕಿಡ್ ಆಗಿತ್ತು ಎನ್ನಲಾಗಿದೆ. ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ – vishwanews24

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

Leave a Reply