Featured

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ – Vishwanews24

ಮಂಗಳೂರು: ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವ ಜಾದೂ ಸಮ್ಮೇಳನ : ಜಾದೂಗಾರ ಕುದ್ರೋಳಿ ಗಣೇಶ್ ಅವರ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಥೈಲ್ಯಾಂಡಿನ ಬ್ಯಾಂಕಾಕ್‌ನಲ್ಲಿ  ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.

ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.

ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

16 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

17 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

17 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago