ಮಂಗಳೂರು: ಥೈಲ್ಯಾಂಡಿನ ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.
ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.
ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…