Featured

ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅಭಿನಂದನೆ – vishwanews24

ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ನಗರ ಪೊಲೀಸರಿಗೆ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅಭಿನಂದನೆ

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ನಗರ ಪೊಲೀಸರ ಕಾರ್ಯವೈಖರಿಯನ್ನು ಪ್ರಶಂಸಿ ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ಅವರು ಅಭಿನಂದಿಸಿದರು.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಅಕ್ಷಿತ್ ಸುವರ್ಣ ಅವರು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ಪ್ರಕರಣವನ್ನು ಕೇವಲ ಮೂರು ದಿನದ ಅವಧಿಯಲ್ಲಿ ತನ್ನ ಪೊಲೀಸ್ ಸಿಬಂದಿಗಳ ಕಾರ್ಯಾಚರಣೆಯಲ್ಲಿ ಭೇಧಿಸಿದ್ದಲ್ಲದೆ ಮೂವರು ಆರೋಪಿಗಳನ್ನು ಬಂಧಿಸಿ ಕದ್ದ ಸೊತ್ತುಗಳನ್ನು ವಶಪಡಿಸಿಕೊಂಡಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ. ಪೋಲಿಸರ ಕ್ಷಿಪ್ರ ಕಾರ್ಯಾಚರಣೆ ಸರ್ವತ್ರ ಮೆಚ್ಚುಗೆಗೆ ಪಾತ್ರವಾಗಿದ್ದು ಪೊಲೀಸರ ಮೇಲಿರುವ ಅಭಿಮಾನವನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.

ದರೋಡೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಿದ ಪೊಲೀಸ್ ಇಲಾಖೆಯೊಂದಿಗೆ ನಾಗರಿಕ ಸಮಾಜ ಸದಾ ಬೆನ್ನೆಲೆಬುಬಾಗಿ ನಿಲ್ಲಿಲಿದೆ. ನಗರದಲ್ಲಿ ಇಂತಹ ಘಟನೆಗಳು ಮುಂದೆ ನಡೆಯದಂತೆ ಪೊಲೀಸ್ ಇಲಾಖೆ ಕೂಡ ಎಚ್ಚರವಹಿಸಬೇಕು ಮತ್ತು ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಅಕ್ಷಿತ್ ಸುವರ್ಣ ಮನವಿ ಮಾಡಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago