ಮಂಗಳೂರು: ನಗರದ ಲೇಡಿ ಹಿಲ್‌ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು.
ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು.
ನಾರಾಯಣ ಗುರು ವೃತ್ತ ಉದ್ಘಾಟಿಸಿ ಮಾತನಾಡಿದ ಸುನಿಲ್ ಕುಮಾರ್, ನಗರದ ಸೌಂದರ್ಯೀಕರಣಕ್ಕೆ ಈಗಿನ ಆಡಳಿತ ಒತ್ತು ನೀಡಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಮೇಲೆ ಆಡಳಿತಕ್ಕೆ ಶ್ರದ್ಧೆ ಮತ್ತು ಭಕ್ತಿ ಇದ್ದು ಅವಕಾಶ ಸಿಕ್ಕಿದಾಗಲೆಲ್ಲ ಅವರ ಆದರ್ಶವನ್ನು ಪಾಲಿಸಲಾಗಿದೆ. ವೃತ್ತದ ಹೆಸರಿನಲ್ಲಿ ಮಹಾಪುರುಷರ ಹೆಸರು ಶಾಶ್ವತ ಆಗಿರುತ್ತದೆ ಎಂಬುದನ್ನು ಮನಗಂಡು ಇಲ್ಲಿ ಈ ವೃತ್ತ ನಿರ್ಮಿಸಲಾಗಿದೆ. ಸರ್ಕಾರ ಮತ್ತು ಮಹಾನಗರಪಾಲಿಕೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಮುಂದುವರಿದಿದೆ ಎಂದರು.
ಶಾಸಕ ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಕೆ., ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಭಾಸ್ಕರ್ ಎನ್, ಸದಸ್ಯ ಜಯಾನಂದ ಚೇಳ್ಯಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಸಾಯಿರಾಮ್ ಮತ್ತಿತರರು ಇದ್ದರು.
ಸ್ವಾಗತ ಭಾಷಣ ಮಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಶಿವರಾತ್ರಿಗೆ ಮೊದಲು ಗೋಕರ್ಣನಾಥೇಶ್ವರ ಕ್ಷೇತ್ರದ ಎದುರಿನ ರಸ್ತೆಗೆ ವಿಶೇಷ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ವೃತ್ತ ನಿರ್ಮಾಣದಲ್ಲಿ ಭಾಗಿಯಾದ ಗುತ್ತಿಗೆದಾರರು, ಶಿಲ್ಪಿಗಳು ಮತ್ತಿತರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…