Featured

ಮಂಗಳೂರು : ಬ್ರೇಕ್ ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಚಾಲಕ – vishwanews24

ಮಂಗಳೂರು : ಬ್ರೇಕ್ ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಚಾಲಕ

ಮಂಗಳೂರು:ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ ಪಾರು ಮಾಡಿದ ಘಟನೆ ಇಂದು ಬೆಳಗ್ಗೆ ಮಂಗಳೂರು ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಿಗ್ಗೆ 8 ಗಂಟೆ ಸಮಯಕ್ಕೆ ನಗರದ ಬಳ್ಳಾಲ್‌ಬಾಗ್‌ಗೆ ಆಗಮಿಸುತ್ತಲೇ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದಿದ್ದಾರೆ.

ತಕ್ಷಣವೇ ಬಸ್‌ನ್ನು ಫುಟ್‌ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪಾರು ಮಾಡಿದ್ದಾರೆ. ಬೆಳಿಗ್ಗೆ ಹೊತ್ತು ಆಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರು ತೋರಿದ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago