Featured

ಮಂಗಳೂರು : ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ – Vishwanews24

ಭಜರಂಗದಳದ ಮೂವರಿಗೆ ಗಡಿಪಾರು ನೋಟಿಸ್- ಸರ್ಕಾರದ ವಿರುದ್ದ ಹಿಂದೂ ಸಂಘಟನೆಗಳು ಆಕ್ರೋಶ

ಮಂಗಳೂರು: ಇಲ್ಲಿನ ಮೂವರು ಭಜರಂಗದಳದ ಕಾರ್ಯಕರ್ತರ ಗಡಿಪಾರು ವಿಚಾರ ಇದೀಗ ರಾಜ್ಯಾದ್ಯಂತ ಚರ್ಚೆಯಾಗ್ತಿದೆ. ಇದೊಂದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತವಾಗಿದೆ. ಸರ್ಕಾರದ ಈ ನಡೆಗೆ ಹಿಂದೂ ಸಂಘಟನೆಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಮಂಗಳೂರಲ್ಲಿ  ನೈತಿಕ ಪೊಲೀಸ್‍ಗಿರಿ ನಡೆಸಿದ್ದ ಭಜರಂಗದಳದ ಮೂವರು ಕಾರ್ಯಕರ್ತರನ್ನು ಗಡಿಪಾರು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸುಲ್ತಾನ್ ಜ್ಯುವೆಲ್ಲರಿಯ ಕಾರ್ಯಕ್ರಮ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಭಜರಂಗದಳದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಕಾಶ್ ಶಕ್ತಿನಗರ ಎನ್ನುವವರು ನೈತಿಕ ಪೊಲೀಸ್‍ಗಿರಿ  ಪ್ರದರ್ಶಿಸಿದ್ರು. ಈ ಬೆನ್ನಲ್ಲೇ ಪದೇ ಪದೇ ಕಾನೂನುಭಂಗ ಮಾಡ್ತಿರೋ ನಿಮ್ಮನ್ನು ಏಕೆ ಗಡಿಪಾರು  ಮಾಡಬಾರದು, ಉತ್ತರಿಸಿ ಎಂದು ನೊಟೀಸ್ ಜಾರಿ ಮಾಡಿದೆ.

ಮಂಗಳೂರು ಪೊಲೀಸ್ ಆಯುಕ್ತರು ಮಾತ್ರ ತಮ್ಮ ಕ್ರಮವನ್ನು ಸಮರ್ಥಿಸಿದ್ದಾರೆ. ಅವರು ನಮಗೆ ಆರೋಪಿಗಳಷ್ಟೇ ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ ಎಂದು ತಿಳಿಸಿದ್ದಾರೆ.

ಗಡಿಪಾರು ನೊಟೀಸ್‍ಗೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಗೋಹತ್ಯೆ ವಿರುದ್ಧ ಕಾನೂನು ಇದೆ, ಅಕ್ರಮ ಗೋಹತ್ಯೆ ಮಾಡೋದನ್ನು ನೋಡಿ ಸುಮ್ಮನಿರಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈವರೆಗೆ ಪೊಲೀಸರಿಗೆ ತಿಳಿಸಿಯೇ ದಾಳಿ ಮಾಡುತ್ತಿದ್ದೆವು. ಇನ್ನು ಪೊಲೀಸರಿಗೆ ತಿಳಿಸದೆ ದಾಳಿ ಮಾಡ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago