ಮಂಗಳೂರು : ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ನರೇಂದ್ರ ಮೋದಿಯವರ ಸಾಧನೆಗಳು,10 ವರ್ಷದಲ್ಲಿ ದೇಶದಲ್ಲಿ ಅವರು ಮಾಡಿರುವ ಕೆಲಸ. ಮುಂದಿನ 25 ವರ್ಷಗಳ ಕಾಲ ವಿಕಸಿತ ಭಾರತದ ಕಲ್ಪನೆ, ಎಲ್ಲರೂ ಒಟ್ಟಾಗಿ ಒಂದಾಗಿ ಸೇರಿಕೊಂಡು ದೇಶದ ಅಭಿವೃದ್ಧಿ ಮಾಡಬೇಕು ಎಂಬ ಪರಿಕಲ್ಪನೆ. ಭಾರತ ದೇಶವನ್ನು ನಂಬರ್ ಒನ್ ಮಾಡಬೇಕು ಅನ್ನೋದೇ ನಮ್ಮ ಗ್ಯಾರೆಂಟಿ ಎಂದು ಹೇಳಿದರು.
ಕಾಂಗ್ರೆಸ್ ನ ಗ್ಯಾರೆಂಟಿ ಯಾವ ರೀತಿ ಆಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಯಾವುದೇ ಶಿಲಾನ್ಯಾಸ ಮಾಡದ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಯಾವುದೇ ಹೊಸ ಯೋಜನೆಗೆ ಶಿಲಾನ್ಯಾಸ ಮಾಡದ ಜಿಲ್ಲಾ ಉಸ್ತುವಾರಿ ಸಚಿವ ಅಂದ್ರೆ ಅದು ದಿನೇಶ್ ಗುಂಡೂರಾವ್. ಗ್ಯಾರಂಟಿಗೆ ದುಡ್ಡು ಕೊಟ್ಟು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದ ಸ್ಥಿತಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನ ಕೊಟ್ಟಿದೆ. 5 ರಾಷ್ಟ್ರೀಕೃತ ಬ್ಯಾಂಕ್ ಗಳನ್ನ ದೇಶಕ್ಕೆ ಕೊಟ್ಟಿದೆ. ಇಂತಹ ಪ್ರಗತಿಶೀಲ ಜಿಲ್ಲೆಯನ್ನ ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯಡಿಯಲ್ಲಿ ದೇಶದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇನೆ ಎಂದು ಚೌಟ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…