Featured

ಮಂಗಳೂರು: ಭಿಕ್ಷೆ ಬೇಡಿದ ಲಕ್ಷ ರೂ. ಹಣವನ್ನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ ವೃದ್ದೆ  – Vishwanews24

ಮಂಗಳೂರು: ಭಿಕ್ಷೆ ಬೇಡಿದ ಲಕ್ಷ ರೂ. ಹಣವನ್ನ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ ವೃದ್ದೆ

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ವೃದ್ದೆಯೊಬ್ಬರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೋಡು ನಿವಾಸಿ 80ರ ಹರೆಯದ ಅಶ್ವಥಮ್ಮ ದೇವಸ್ಥಾನಕ್ಕೆ ಭಿಕ್ಷೆಯ ಹಣ ದೇಣಿಗೆ ನೀಡಿದವರು. ವರ್ಷದ ಬಹುತೇಕ ಸಮಯ ಅಯ್ಯಪ್ಪ ಮಾಲಾಧಾರಿಯಾಗಿಯೇ ಇರುವ ಆಶ್ವಥಮ್ಮ ಹಲವು ದೇವಸ್ಥಾನಗಳಲ್ಲಿ ಭಿಕ್ಷೆ ಬೇಡುತ್ತಾರೆ.

ಅದೇ ರೀತಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಹಾಗೂ ಕರಾವಳಿಯ ಇತರೆ ದೇವಸ್ಥಾನಗಳಲ್ಲಿ ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ಪೊಳಲಿ ದೇವಸ್ಥಾನದ ಅನ್ನದಾನ ನಿಧಿಗೆ ಸಮರ್ಪಿಸಿ ಮಾದರಿಯಾಗಿದ್ದಾರೆ. ಇವರ ಮಕ್ಕಳು ಇಹಲೋಕ ತ್ಯಜಿಸಿದ್ದು, ಇಬ್ಬರು ಮೊಮ್ಮಕ್ಕಳು ಮೀನುಗಾರಿಕೆ ನಡೆಸುತ್ತಿದ್ದಾರೆ.

ವಿಶೇಷವೆಂದ್ರೆ ಇವರು ಭಿಕ್ಷೆ ಬೇಡಿದ ಒಂದಷ್ಟು ಮೊತ್ತವನ್ನ ಕುಟುಂಬ ನಿರ್ವಹಣೆಗೆ ಬಳಸಿದ್ರೆ ಉಳಿದ ಹಣವನ್ನ ಸಂಗ್ರಹಿಸಿಟ್ಟು ದೇವಾಲಯಗಳಿಗೆ ದೇಣಿಗೆ ನೀಡುವುದು ಅಭ್ಯಾಸ. ಬೆಳಿಗ್ಗಿನಿಂದ ಸಂಜೆಯವರೆಗೆ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಪಿಗ್ಮಿಗೆ ಕಟ್ಟಿ ಅಲ್ಲಿ ಜಮೆಯಾದ ಹಣವನ್ನು ದೇವಸ್ಥಾನಗಳಿಗೆ ದೇಣಿಗೆ ನೀಡುತ್ತಿದ್ದಾರೆ.

ಸುಮಾರು 18 ವರ್ಷಗಳಿಂದ ಆಶ್ವಥಮ್ಮ ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ದೇವಸ್ಥಾನಗಳಿಗೆ ಈ ರೀತಿ ಹಣವನ್ನು ದೇಣಿಗೆ ನೀಡಿದ್ದಾರೆ. ಈವರೆಗೆ ಇವರು ದೇಣಿಗೆ ನೀಡಿದ ಹಣ ಲಕ್ಷಾಂತರ ರೂ. ಕೆರೆಯ ನೀರನು ಕೆರೆಗೆ ಚೆಲ್ಲಿದಂತೆ ದೇವಸ್ಥಾನದ ಬಳಿ ಬೇಡಿದ ಹಣವನ್ನು ಹಸಿದ ಹೊಟ್ಟೆಯಲ್ಲಿ ಯಾರೂ ಇರಬಾರದು ಅನ್ನೋ ಉದ್ದೇಶದಿಂದ ದೇವಸ್ಥಾನದ ಅನ್ನದಾನಕ್ಕೆ ನೀಡುತ್ತಿದ್ದಾರೆ.

ಆಶ್ವಥಮ್ಮರ ಈ ಸಮಾಜಮುಖಿ ಕಾರ್ಯದ ಲೆಕ್ಕ ಹಾಕಿದ್ರೆ ಅದರ ಪಾಲು ದೊಡ್ಡದಿದೆ. 80ರ ಇಳಿ ವಯಸ್ಸಿನಲ್ಲೂ ಈ ವೃದ್ದೆ ಭಿಕ್ಷಾಟನೆ ಮೂಲಕ ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬಂತೆ ಬದುಕುತ್ತಿದ್ದಾರೆ. ಹೀಗೆ ಆಶ್ವಥಮ್ಮ ಭಿಕ್ಷೆ ಬೇಡಿದ ಹಣವನ್ನ ದೇವಸ್ಥಾನಗಳ ಧಾರ್ಮಿಕ ಕಾರ್ಯ, ದೇಗುಲಗಳ ಸಾಮಾಜಿಕ ಕಾರ್ಯಗಳಿಗೆ ಅರ್ಪಿಸಿದ್ದಾರೆ.

ಹೀಗೆ ದಾನವಾಗಿ ನೀಡಿದ ಹಣವೇ ಬರೋಬ್ಬರಿ 6 ಲಕ್ಷ ರೂಪಾಯಿಗಳು. ಇವರ ಪತಿ 18 ವರ್ಷಗಳ ಹಿಂದೆ ನಿಧನರಾಗಿದ್ದು, ಆ ಬಳಿಕ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

17 ವರ್ಷಗಳ ಹಿಂದೆ ತನ್ನ ಮೊಮ್ಮಗಳಿಗೆ ಮಾಲೆ ಹಾಕಿಸಿ ಶಬರಿಮಲೆಗೆ ತೆರಳಿ ಪಂದಳ, ಎರಿಮಲೆ, ಪಂಪೆಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಗೆ ಅನ್ನದಾನ ನೀಡಿದ್ದಾರೆ. ಸಾಲಿಗ್ರಾಮ ಶ್ರೀಗುರು ನರಸಿಂಹ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ, ಪೊಳಲಿ ಅಖಿಲೇಶ್ವರ ದೇವಸ್ಥಾನದ ಅಯ್ಯಪ್ಪ ವೃತಧಾರಿಗಳಿಗೆ 1.50ಲಕ್ಷ ಸೇರಿ ಗಂಗೊಳ್ಳಿ ದೇವಾಲಯದಲ್ಲೂ ಅನ್ನದಾನ ಕೊಡಿಸಿದ್ದಾರೆ. ಇದರ ಜೊತೆ ಕರಾವಳಿ ಜಿಲ್ಲೆಗಳ ಹಲವು ಅನಾಥಾಶ್ರಮಗಳಿಗೂ ದೇಣಿಗೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago