ಮಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಒಂದೆಡೆ ಭೂಕುಸಿತ, ಪ್ರವಾಹದಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ ಮುಂದುವರೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಬೈಕ್ ನಲ್ಲಿ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬೈಕ್ ಸಮೇತ ಸವಾರ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬೈಕ್ ಟ್ಯಾಂಕ್ ನಲ್ಲಿದ್ದ ಪೆಟ್ರೋಲ್ ಲೀಕ್ ಆಗಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಬೈಕ್ ಗೆ ಆವರಿಸಿದೆ. ಅಲ್ಲದೆ ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಲಗಳ ಪ್ರಕಾರ ಈತ ಹಾಲು ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ಎಂದು ತಿಳಿದುಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…